ಗೃಹಲಕ್ಷ್ಮಿಯರಿಗೆ ಸುವರ್ಣಾವಕಾಶ: ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮನೆಯೊಡತಿಯರಿಗೆ/ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆ ಕುರಿತು ರೀಲ್ಸ್ ಮಾಡಿ.
ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್
Updated on

ಬೆಂಗಳೂರು: ಯುವಜನತೆಯಲ್ಲಿ ರೀಲ್ಸ್ ಕ್ರೇಜ್ ಹೆಚ್ಚಾಗಿದೆ. ಇದರ ಮಧ್ಯೆಯೇ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ಅವಕಾಶ ಕಲ್ಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಒಂದು ಬಹುಮಾನವನ್ನೂ ಘೋಷಿಸಿದ್ದಾರೆ.

ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ 'ಗೃಹಲಕ್ಷ್ಮಿ' ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ/ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ. ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಸೆಪ್ಟೆಂಬರ್ 30ರೊಳಗೆ ರೀಲ್ಸ್ ಮೂಲಕ ಸೋಷಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ ಗಳು ಹೆಚ್ಚಿನ ವೀಕ್ಷಣೆ ಪಡೆದುಕೊಳ್ಳುತ್ತವೆಯೋ ಅಂತಾ ರೀಲ್ಸ್ ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಿದ್ದೇನೆ‌ ಎಂದು ತಿಳಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್
ಗೃಹಲಕ್ಷ್ಮೀ ಹಣದಲ್ಲಿ ಊರಿನ ಜನಕ್ಕೆ ಊಟ ಹಾಕಿದ್ದ ಅಕ್ಕಾತಾಯಿಯನ್ನು ಸನ್ಮಾನಿಸಿದ ಸಿದ್ದರಾಮಯ್ಯ

ಮೊದಲ 50 ಮನೆಯೊಡತಿಯರಿಗೆ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ. ಈ ಒಂದು ಗೃಹಲಕ್ಷ್ಮೀ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹಲಕ್ಷ್ಮೀ ಯೋಜನೆಯ ಎಲ್ಲ ಯಜಮಾನಿಯರಲ್ಲಿ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com