Muda Scam: ಮೊದಲ ತಲೆದಂಡ, 'ಮುಡಾ' ಹಿಂದಿನ ಆಯುಕ್ತ GT Dinesh Kumar ಅಮಾನತು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಿಂದಿನ ಆಯುಕ್ತ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ.
Former MUDA commissioner GT Dinesh Kumar suspended
ಆಯುಕ್ತ GT Dinesh Kumar ಅಮಾನತು
Updated on

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿರುವ ಮುಡಾ ಹಗರಣದಲ್ಲಿ (Muda Scam) ಮೊದಲ ತಲೆದಂಡವಾಗಿದ್ದು, ರಾಜ್ಯಪಾಲರ ಆದೇಶಾನುಸಾರ ಹಿಂದಿನ ಆಯುಕ್ತ ಜಿಟಿ ದಿನೇಶ್ ಕುಮಾರ್ (GT Dinesh Kumar) ರನ್ನು ಅಮಾನತು ಮಾಡಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್​ ಹಂಚಿಕೆ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಹಗರಣದಲ್ಲಿ ಮೊದಲ ತಲೆದಂಡವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಹಿಂದಿನ ಆಯುಕ್ತ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿದೆ.

Former MUDA commissioner GT Dinesh Kumar suspended
ಮುಡಾ ಹಗರಣ ನಡುವಲ್ಲೇ ವಿಶ್ವನಾಥ್-ಡಿಕೆಶಿ ಭೇಟಿ: ಕುತೂಹಲ ಮೂಡಿಸಿದ ನಾಯಕರ ಮಾತುಕತೆ!

ಅಲ್ಲದೆ ಕೂಡಲೇ ಅವರ ನೇಮಕ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿತ್ತು. ಅಧಿಕಾರಿಗಳು ತಪ್ಪು ಮಾಡಿದರೆ ಕ್ರಮ ತೆಗೆದುಕೊಳ್ಳಬೇಕು, ಆದರೆ ಆರೋಪ ಕೇಳಿ ಬಂದಾಗಲೂ ಈ ರೀತಿ ನೇಮಕ ಮಾಡಿದ್ದೇಕೆ ಎಂದು ಬಿಜೆಪಿ ಪ್ರಶ್ನಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಮಧ್ಯ ಇದೀಗ ರಾಜ್ಯಪಾಲರ ಆದೇಶಾನುಸಾರ ಮುಡಾದಿಂದ ಹಾವೇರಿ ವಿವಿ ಕುಲಸಚಿವರಾಗಿದ್ದ ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.

ಲಕ್ಷ್ಮಿಪುರಂ ಠಾಣೆಯಲ್ಲಿ ದೂರು

ಮುಡಾ ಮಾಜಿ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಹಾಗೂ ಜಿ.ಟಿ.ದಿನೇಶ್ ಕುಮಾರ್ ಅವರು ಸರಕಾರಕ್ಕೆ 5 ಸಾವಿರ ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ. ಇವರಿಬ್ಬರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ವಕೀಲ ಅರುಣ್‌ಕುಮಾರ್ ಎನ್ನುವರು ಮೈಸೂರಿನ ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Former MUDA commissioner GT Dinesh Kumar suspended
ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಮುಡಾ ಹಗರಣದ ಆರೋಪ ಹೊತ್ತಿರುವ ಮಧ್ಯ ಆಯುಕ್ತರಾಗಿದ್ದ ದಿನೇಶ್​ ಕುಮಾರ್​ ಅವರನ್ನು ರಾಜ್ಯ ಸರ್ಕಾರ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿತ್ತು. ಆದ್ರೆ, ಇದೀಗ ರಾಜ್ಯಪಾಲರ ಆದೇಶಾನುಸಾರವಾಗಿ ದಿನೇಶ್ ಕುಮಾರ್ ಅವರನ್ನ ಅಮಾನತುಗೊಳಿಸಲಾಗಿದೆ. ಸಸ್ಪೆಂಡ್ ಮಾಡಿ ಕಾರ್ಯದರ್ಶಿ ಉಮಾದೇವಿ ಅವರು ಇಂದು (ಸೆಪ್ಟೆಂಬರ್ 02) ಆದೇಶ ಹೊರಡಿಸಿದ್ದಾರೆ.

ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದ ಬಳಿಕ ಆಯುಕ್ತ, ಕೆಎಎಸ್​ ಅಧಿಕಾರಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿವಿ ಕಲಸಚಿವರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆ ನಡೆಯುತ್ತಿದ್ದರೂ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಕ ಮಾಡಿರುವ ರಾಜ್ಯ ಸರಕಾರದ ಕ್ರಮದ ವಿರುದ್ಧ ಬಿಜೆಪಿ ಭಾರಿ ಆಕ್ರೋಶ ವ್ಯಕ್ತಪಡಿಸಿತ್ತು.

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಪ್ರಕರಣ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದು, ಮುಡಾ (Muda) ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದೂ ಪಾತ್ರವಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಇದೇ ವಿಚಾರವಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಥ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಇದೀಗ ಈ ವಿಚಾರ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com