ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಶೀಘ್ರ ಆದೇಶ: ಕೆಡಿಎ ಅಧ್ಯಕ್ಷ

ಇತ್ತೀಚೆಗಷ್ಟೇ ರಾಯಚೂರಿನಲ್ಲಿ ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ
Updated on

ಮಂಗಳೂರು: ಸರ್ಕಾರಿ ವೈದ್ಯರು ಕನ್ನಡದಲ್ಲಿ ಔಷಧಿ ಚೀಟಿ(ಪ್ರಿಸ್ಕ್ರಿಪ್ಷನ್) ಬರೆಯುವುದನ್ನು ಕಡ್ಡಾಯಗೊಳಿಸಿ ಶೀಘ್ರವೇ ಆದೇಶ ಹೊರಡಿಸುವುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ(ಕೆಡಿಎ)ದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ರಾಯಚೂರಿನಲ್ಲಿ ಸರ್ಕಾರಿ ವೈದ್ಯರು ಕನ್ನಡದಲ್ಲಿ ಪ್ರಿಸ್ಕ್ರಿಪ್ಷನ್ ಬರೆಯುವಂತೆ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ಇದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿ ಮತ್ತೊಂದು ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಅನೇಕ ರೋಗಿಗಳಿಗೆ ಇಂಗ್ಲಿಷ್ ಪ್ರಿಸ್ಕ್ರಿಪ್ಷನ್ ಅರ್ಥವಾಗುತ್ತಿಲ್ಲ ಮತ್ತು ಫಾರ್ಮಾಸಿಸ್ಟ್‌ಗಳು ಪ್ರಿಸ್ಕ್ರಿಪ್ಷನ್ ಅನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗದಿದ್ದರೆ ತಪ್ಪು ಔಷಧಿ ನೀಡುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.

ಪುರುಷೋತ್ತಮ ಬಿಳಿಮಲೆ
KPSC: ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಎಡವಟ್ಟು; ಮರು ಪರೀಕ್ಷೆಗೆ ಸಿಎಂ ಸೂಚನೆ

ಕನ್ನಡದಲ್ಲಿದ್ದರೆ ರೋಗಿಗೆ ತಾವು ಸೇವಿಸುವ ಔಷಧಿ ಯಾವುದು ಎಂದು ತಿಳಿಯುತ್ತದೆ ಎಂದು ಪುರುಷೋತ್ತಮ ಬಿಳಿಮಲೆ ಹೇಳಿದರು.

ಇದೇ ವೇಳೆ ಈ ವರ್ಷದ ನವೆಂಬರ್ 1 ರೊಳಗೆ ರಾಜ್ಯದ ತಮ್ಮ ಶಾಖೆಗಳಲ್ಲಿ ಕನಿಷ್ಠ ಒಬ್ಬ ಕನ್ನಡಿಗ ಸಿಬ್ಬಂದಿಯನ್ನು ನೇಮಿಸುವಂತೆ ರಾಜ್ಯದ ಎಲ್ಲಾ ಬ್ಯಾಂಕ್‌ಗಳ ಮುಖ್ಯಸ್ಥರಿಗೆ ಪತ್ರ ಬರೆಯುವುದಾಗಿ ಪುರುಷೋತ್ತಮ ಬಿಳಿಮಲೆ ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com