ರೇಣುಕಾಸ್ವಾಮಿ ಹತ್ಯೆ ಪ್ರಕರಣ: 10ನೇ ಆರೋಪಿ ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್
ವಿಜಯಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್'ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಸಿಎಆರ್ ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ಥಳಾಂತರ ಮಾಡಲಾಗಿದೆ. ಜೈಲಿಗೆ ಬಂದ ಬಳಿಕ ವಿನಯ್ ಆರೋಗ್ಯ ತಪಾಸಣೆ ಹಾಗೂ ಇತರ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಕೇಂದ್ರ ಕಾರಾಗೃಹದ ಒಳಗೆ ಕಾರಾಗೃಹ ಸಿಬ್ಬಂದಿ ಕರೆದೊಯ್ದರು.
ಕಾರಾಗೃಹದ ಸೆಲ್ ನಂಬರ್ 1 ರಲ್ಲಿ ಆರೋಪಿ ವಿನಯ್ ನನ್ನು ಇರಿಸಲಾಗಿದೆ. 14433 ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ಸೆಲ್‌ನಲ್ಲಿ ಶೌಚಾಲಯ ಸೌಲಭ್ಯ ಇದ್ದು, ಸಿಸಿಟಿವಿ ಕಣ್ಗಾವಲು ಇದೆ. ಜೊತೆಗೆ ಇಬ್ಬರು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದಿದ್ದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್‌ನನ್ನು ಬಂಧನಕ್ಕೊಳಪಡಿಸಲಾಗಿತ್ತು. ಅಪರಾಧ ನಡೆದ ಶೆಡ್ ವಿನಯ್ ಕುಟುಂಬಕ್ಕೆ ಸೇರಿದ್ದು ಎಂದು ತಿಳಿದುಬಂದಿತ್ತು.
ವಾರದಲ್ಲಿ ಒಂದು ಬಾರಿ ಮಾತ್ರ ಕುಟುಂಬಸ್ಥರಿಗೆ ಹಾಗೂ ಅವರ ಪರ ವಕೀಲರಿಗೆ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಜೈಲು ಅಧೀಕ್ಷಕ ಡಾ.ಐ.ಜೆ.ಮ್ಯಾಗೇರಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ