ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣದಾರರಿಗೆ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, BBMP ವ್ಯಾಪ್ತಿಯಲ್ಲಿ ಕ್ರಾಂತಿಕಾರಕ 'ಕಟ್ಟಡ ನಕ್ಷೆ ಮಂಜೂರಾತಿ' ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ.
ಈ ಬಗ್ಗೆ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, 'ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ‘ನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ.
ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ಗಳ ಬಳಿ ಅನುಮೋದಿಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ ಎಂದರು.
ಬಿಡಿಎ, ಗೃಹ ನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಪಾಲಿಕೆಯ ಎಂಜಿನಿಯರ್ಗಳು ಪರಿಶೀಲನೆ ನಡೆಸುತ್ತಾರೆ. 50/80 ವಿಸ್ತೀರ್ಣದವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ. ಬಿಡಿಎ, ಗೃಹ ನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ.
ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋದಕರಂತೆ ಅನುಮೋದಿತ ಎಂಜಿನಿಯರ್ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರ ಪಾಲಿಕೆಯ ಎಂಜಿನಿಯರ್ಗಳು ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದರು.
ಸದ್ಯ ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಯಶಸ್ವಿಯಾಗಿ ಜಾರಿಯಾದ ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲಾ ವಲಯಗಳಿಗೆ ವಿಸ್ತರಿಸಲಾಗುತ್ತಿದೆ. ಇದರಿಂದ ಜನರು ಪಾಲಿಕೆಗೆ ಅಲೆಯುವುದು ತಪ್ಪುತ್ತದೆ ಎಂದು ತಿಳಿಸಿದರು.
ನಗರದಾದ್ಯಂತ 2,795 ರಸ್ತೆಗುಂಡಿಗಳು: ದುರಸ್ತಿಗೆ ರೂ. 660 ಕೋಟಿ
ಇದೇ ವೇಳೆ ಬಿಬಿಎಂಪಿ ವಲಯದಲ್ಲಿ 2,795 ರಸ್ತೆಗುಂಡಿಗಳನ್ನು ಗುರುತಿಸಲಾಗಿದ್ದು, ಎಲ್ಲಾ ರಸ್ತೆ ಗುಂಡಿಗಳನ್ನು ಮುಂದಿನ 15 ದಿನಗಳಲ್ಲಿ ಸಂಪೂರ್ಣವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರೂ. 660 ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳನ್ನು ದುರಸ್ತಿ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದು ಡಿಡೆ ಶಿವಕುಮಾರ್ ಹೇಳಿದರು.
'ನಾನು ಇತ್ತೀಚೆಗೆ ದೆಹಲಿಯಲ್ಲಿದ್ದಾಗ, ನಾನು ಅಲ್ಲಿನ ಚಿಕ್ಕ ರಸ್ತೆಗಳಿಗೆ ಭೇಟಿ ನೀಡಲು ನಿರ್ಧರಿಸಿದೆ. ಬೆಂಗಳೂರಿನ ರಸ್ತೆಗಳು ಅವುಗಳಿಗಿಂತ ತುಂಬಾ ಚೆನ್ನಾಗಿವೆ. ನಾನು ಅವರನ್ನು ಟೀಕಿಸುವುದಿಲ್ಲ. ಆದರೆ ಅದು ವಾಸ್ತವ. ಬಿಬಿಎಂಪಿ ಅಧಿಕಾರಿಗಳ ಉತ್ತಮ ಕೆಲಸದಿಂದಾಗಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪ್ರವಾಹ ಮತ್ತು ರಸ್ತೆಯಲ್ಲಿ ನೀರು ನಿಲ್ಲುವುದನ್ನು ನಿಲ್ಲಿಸಲಾಗಿದೆ. ಈ ಕಾರ್ಯಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಎನ್‌ಜಿಟಿ ನಿಯಮಾವಳಿಗಳ ಪ್ರಕಾರ ರಾಜ ಕಾಲುವೆಗಳ ಉದ್ದಕ್ಕೂ 50 ಮೀಟರ್ ತ್ರಿಜ್ಯದಲ್ಲಿ ಯಾವುದೇ ನಿರ್ಮಾಣವನ್ನು ಕೈಗೊಳ್ಳಲಾಗುವುದಿಲ್ಲ. ನಾವು ಅಂತಹ 300 ಕಿಮೀ ಪ್ರದೇಶಗಳನ್ನು ಗುರುತಿಸಿದ್ದೇವೆ. ಅಲ್ಲಿ ರಾಜ ಕಾಲುವೆಗಳ ಉದ್ದಕ್ಕೂ 30 ಅಡಿ ರಸ್ತೆ ನಿರ್ಮಿಸಲಾಗುವುದು. ಭೂ ಮಾಲೀಕರಿಗೆ TDR ನೊಂದಿಗೆ ಪರಿಹಾರವನ್ನು ನೀಡಲಾಗುತ್ತದೆ. ಹೆಬ್ಬಾಳ, ನಾಗವಾರ, ಬೆಳ್ಳಂದೂರು, ಬೆಂಗಳೂರು ದಕ್ಷಿಣ ಸುತ್ತಮುತ್ತ ಜಮೀನುಗಳನ್ನು ಗುರುತಿಸಲಾಗಿದೆ.
ಮೊದಲ ಹಂತದಲ್ಲಿ ಸುಮಾರು 100 ಕಿಮೀ ರಸ್ತೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಈ ರಸ್ತೆಗಳು ಬಸ್‌ಗಳ ಬಳಕೆಗೆ ಅಲ್ಲ. ಆದರೆ ಇತರ ವಾಹನಗಳಿಗೆ ತೆರೆದಿರುತ್ತವೆ. ಇದಕ್ಕಾಗಿ 200 ಕೋಟಿ ರೂ ವ್ಯಯವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸಚಿವ ಸಂಪುಟದಲ್ಲೂ ಚರ್ಚೆ ನಡೆದಿದೆ ಎಂದರು.
ಗುತ್ತಿಗೆದಾರರ ನೆರವಿಗೆ ಸರ್ಕಾರ ಬದ್ಧ
ಅಂತೆಯೇ ಪಾವತಿ ಬಿಡುಗಡೆಗೆ ಆಗ್ರಹಿಸಿ ಬಿಬಿಎಂಪಿ ಗುತ್ತಿಗೆದಾರರು ಇಂದು ಆರಂಭಿಸಿರುವ ಪ್ರತಿಭಟನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ಅವರು, 'ಗುತ್ತಿಗೆದಾರರ ನೋವು ನನಗೆ ಅರ್ಥವಾಗುತ್ತದೆ. ಶೇ.75ರಷ್ಟಿದ್ದ ಬಾಕಿಯನ್ನು ಶೇ.50ಕ್ಕೆ ಇಳಿಸಿದ್ದೇವೆ.
ಆಯೋಗದ ಬಳಿ ಕೆಲವು ಬಿಲ್‌ಗಳು ಬಾಕಿ ಉಳಿದಿವೆ. ಆಯೋಗವು ತನ್ನ ಶಿಫಾರಸುಗಳನ್ನು ನೀಡಿದ ನಂತರ ನಾವು ಕಾನೂನಿನ ಮಿತಿಯೊಳಗೆ ಅವರಿಗೆ ಸಹಾಯ ಮಾಡುತ್ತೇವೆ. ಗುತ್ತಿಗೆದಾರರು ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಸರ್ಕಾರಕ್ಕೆ ಕಪ್ಪುಚುಕ್ಕೆ ತರಬಾರದು. ಗುತ್ತಿಗೆದಾರರೊಬ್ಬರು ಪ್ರತಿಭಟನೆ ನಡೆಸಿದರೆ ಮತ್ತೊಬ್ಬರು ಕಾಮಗಾರಿ ಕೈಗೆತ್ತಿಕೊಳ್ಳುತ್ತಾರೆ ಎಂದು ಹೇಳಿದರು.
Advertisement