ನರ್ಸಿಂಗ್ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಶೀಘ್ರದಲ್ಲೇ ಪ್ರಾಧಿಕಾರ ರಚನೆ!

ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು, ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ನರ್ಸಿಂಗ್ ಕಾಲೇಜುಗಳಲ್ಲಿ ಹೆಚ್ಚಿನ ಶುಲ್ಕ ವಸೂಲಿ ಹಾಗೂ ಅಸಮರ್ಪಕ ಸೌಲಭ್ಯಗಳ ಕುರಿತು ಕಳವಳ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಈ ಸಂಸ್ಥೆಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸಲು ಮುಂದಾಗಿದೆ.

ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು, ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ,

ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳು ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ ನೇತೃತ್ವದಲ್ಲಿ 5 ಜನ ಸದಸ್ಯರ ‘ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು’ ರಚಿಸಲಾಗುವುದು. ನರ್ಸಿಂಗ್ ಕಾಲೇಜುಗಳ ಶುಲ್ಕಗಳನ್ನು ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಸರ್ಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್ ಸರ್ಟಿಫಿಕೇಟ್ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್ ಅನ್ನು ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಸಂಗ್ರಹ ಚಿತ್ರ
ಬೆಂಗಳೂರಿನಲ್ಲಿ ನಡೆದ ಉದ್ಯೋಗ ಮೇಳದಲ್ಲಿ 9,651 ಮಂದಿಗೆ ನೇರ ಉದ್ಯೋಗ: ಸಚಿವ ಶರಣಪ್ರಕಾಶ್ ಪಾಟೀಲ್

ಪ್ರಸ್ತುತ ಸರ್ಕಾರಿ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 10,000. ಮ್ಯಾನೇಜ್‌ ಮೆಂಟ್‌ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 1 ಲಕ್ಷ ಮತ್ತು ನಾನ್‌-ಕರ್ನಾಟಕ ವಿದ್ಯಾರ್ಥಿಗಳಿಗೆ 1.40 ಲಕ್ಷ ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ 611 ನರ್ಸಿಂಗ್‌ ಕಾಲೇಜುಗಳಿದ್ದು, 35,000 ಸೀಟ್‌ ಗಳು ಲಭ್ಯವಿದೆ. ಅಲ್ಲದೇ, ಈ ಶುಲ್ಕವನ್ನು ಶೇಕಡಾ 20 ರಷ್ಟು ಹೆಚ್ಚಿಸುವಂತೆ ನರ್ಸಿಂಗ್‌ ಕಾಲೇಜುಗಳ ಆಡಳಿತ ಮಂಡಳಿಯ ಪ್ರತಿನಿಧಿಗಳು ಇತ್ತೀಚೆಗೆ ಮಾಡಿದ ಮನವಿಯನ್ನು ತಿರಸ್ಕರಿಸಲಾಗಿದೆ.

ಈ ಸಮಿತಿಯು ಬಿಎಸ್ಸಿ, ನರ್ಸಿಂಗ್‌ ಹಾಗೂ ಜನರಲ್‌ ನರ್ಸಿಂಗ್‌ ಮತ್ತು ಮಿಡ್‌ವೈಪ್ರೀ (ಜಿಎನ್‌ಎಂ) ಡಿಪ್ಲಮೋ ಪ್ರೋಗ್ರಾಂ ಗಳ ಶುಲ್ಕದ ಬಗ್ಗೆಯೂ ನಿಗಾವಹಿಸಲಿದೆ. ಹಾಗೆಯೇ, ಜಿಲ್ಲಾಧಿಕಾರಿಗಳ ಸಭೆಯನ್ನು ಆಯೋಜಿಸಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಜಿಎನ್‌ಎಂ ನರ್ಸಿಂಗ್‌ ಕಾಲೇಜುಗಳಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಒಂದು ತಿಂಗಳ ಒಳಗಾಗಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಲು ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿ ಮೊಹಮ್ಮದ್‌ ಮೊಯಿಸಿನ್ ಅವರಿಗೆ ಸೂಚನೆ ನೀಡಿದರು.

ಬಿಎಸ್‌ಸಿ ನರ್ಸಿಂಗ್‌ ಕಾಲೇಜುಗಳಿಗೆ ಸಂಬಂಧಿಸಿದಂತೆ ಒಂದು ಪರಿಶೀಲನಾ ತಂಡವನ್ನು ರಚಿಸಿ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಡಾ. ಬಿ.ಎಲ್‌ ಸುಜಾತಾ ಅವರಿಗೆ ಜವಾಬ್ದಾರಿ ಒಪ್ಪಿಸಿದರು.

ನರ್ಸಿಂಗ್‌ ಕಾಲೇಜುಗಳಲ್ಲಿ ಅಗತ್ಯ ಸೌಲಭ್ಯಗಳು, ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ಲ್ಯಾಬೋರೋಟರಿಗಳು, ಗ್ರಂಥಾಲಯಗಳು ಹಾಗೂ ಹೈಜೀನ್‌ ಸ್ಟಾಂರ್ಡ್‌ಡ್‌ ಇಲ್ಲದೇ ಇರುವ ಬಗ್ಗೆ ಹಲವು ದೂರುಗಳು ನಮ್ಮ ಕಚೇರಿಗೆ ಸಲ್ಲಿಕೆಯಾಗಿವೆ. ಹೆಚ್ಚು ಶುಲ್ಕವನ್ನು ತಗೆದುಕೊಳ್ಳುವುದರ ಹೊರತಾಗಿಯೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸಂಸ್ಥೆಗಳು ವಿಫಲವಾಗಿವೆ. ಅಗತ್ಯ ಸೌಲಭ್ಯಗಳನ್ನು ಹೊಂದಿರದೇ ಇರುವ ನರ್ಸಿಂಗ್‌ ಕಾಲೇಜುಗಳ ಅನುಮತಿ ಹಿಂದಕ್ಕೆ ಪಡೆಯಲಾಗುವುದು ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com