'ನನ್ನ ತಂಟೆಗೆ ಬಂದ್ರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡ್ತೀನಿ': ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ವಿರುದ್ಧ ಹಾಲಿ ಶಾಸಕ ರಾಜು ಕಾಗೆ ವಾಗ್ದಾಳಿ

ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ಈ ಹಿಂದೆ ರಾಜು ಕಾಗೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು.
'ನನ್ನ ತಂಟೆಗೆ ಬಂದ್ರೆ ನಿನ್ನ ಬಟ್ಟೆ ಬಿಚ್ಚಿ ಬೆತ್ತಲೆ ಮಾಡ್ತೀನಿ': ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ವಿರುದ್ಧ ಹಾಲಿ ಶಾಸಕ ರಾಜು ಕಾಗೆ ವಾಗ್ದಾಳಿ
Updated on

ಚಿಕ್ಕೋಡಿ: ಮಾತಿನ ವೇಗದಲ್ಲಿ ರಾಜಕೀಯ ನಾಯಕರು ಕೆಲವೊಮ್ಮೆ ಸಾರ್ವಜನಿಕ ವೇದಿಕೆಗಳಲ್ಲಿ ಭಾಷಣ ಮಾಡುವಾಗ ಮಿತಿಯನ್ನು ದಾಟಿ ಹೋಗುತ್ತಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ರಾಜು ಕಾಗೆ, ನನ್ನ ಬಗ್ಗೆ ಮಾತನಾಡಲು ನಿನಗೆ ಯೋಗ್ಯತೆ ಇಲ್ಲ. ನೀನು ನನ್ನ ಬಗ್ಗೆ ಮಾತನಾಡ ಬೇಡ, ಅಪ್ಪಿ-ತಪ್ಪಿ ಮಾತನಾಡಿದರೆ ನಾನು ನಿನ್ನ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ ಎಂದು ಏಕವಚನದಲ್ಲಿ ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೀನು ಬಹಳ ಸತ್ಯ ಹರಿಶ್ಚಂದ್ರ ತರಹ ಮಾತನಾಡುತ್ತಿದ್ದೀಯಾ. ನಿಮ್ಮ ಕಾರ್ಖಾನೆಯಲ್ಲಿ ಕಾಟಾ ಯಾರು ಹೊಡೆದ್ರಿ? ಕಾರ್ಮಿಕರ ದುಡ್ಡಿನಲ್ಲಿ ಹುಟ್ಟುಹಬ್ಬ ಆಚರಿಸಿದವರು ಯಾರು ಎಂದೆಲ್ಲ ಶಾಸಕ ರಾಜು ಕಾಗೆ ಪ್ರಶ್ನಿಸಿದ್ದಾರೆ.

ಮಾಜಿ ಶಾಸಕ ಶ್ರೀಮಂತ್ ಪಾಟೀಲ್ ಈ ಹಿಂದೆ ರಾಜು ಕಾಗೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com