ಮೈಸೂರು: ವಿವಾದಗಳ ಕೇಂದ್ರ ಬಿಂದು 'ಮುಡಾ' ಅಧ್ಯಕ್ಷ ಕೆ. ಮರಿಗೌಡ ಆಸ್ಪತ್ರೆಗೆ ದಾಖಲು

ಮುಡಾ ಅಧ್ಯಕ್ಷ ಮರಿಗೌಡ ಅವರು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ, ಅವರನ್ನು ಮೊದಲು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ವಿಶೇಷ ಚಿಕಿತ್ಸೆಗಾಗಿ ಮೈಸೂರಿಗೆ ವರ್ಗಾಯಿಸಲಾಗಿದೆ.
ಕೆ. ಮರಿಗೌಡ
ಕೆ. ಮರಿಗೌಡ
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಹಾಗೂ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಅವರು ತೀವ್ರ ಅಸ್ವಸ್ಥರಾದ ಹಿನ್ನೆಲೆಯಲ್ಲಿಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಡಾ ಅಧ್ಯಕ್ಷ ಮರಿಗೌಡ ಅವರು ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ, ಅವರನ್ನು ಮೊದಲು ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ವಿಶೇಷ ಚಿಕಿತ್ಸೆಗಾಗಿ ಮೈಸೂರಿಗೆ ವರ್ಗಾಯಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮರಿಗೌಡ ಅವರು ಮುಡಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅವರ ಅಧಿಕಾರಾವಧಿಯು ವಿವಾದಗಳಿಂದ ಹಾಳಾಗಿದೆ, ಇತ್ತೀಚೆಗೆ ಮೈಸೂರು ಕಾಂಗ್ರೆಸ್ ಮುಖಂಡ ಎಂ.ಸಿದ್ದೇಗೌಡ ಅವರು ಮುಡಾ ಬಿಕ್ಕಟ್ಟನ್ನು ಉಲ್ಬಣಗೊಳಿಸಿದ್ದಾರೆ ಎಂದು ಆರೋಪಿಸಿದರು, ಜಿಲ್ಲಾಧಿಕಾರಿ ಮತ್ತು ಮುಡಾ ಆಯುಕ್ತರೊಂದಿಗಿನ ಪತ್ರವ್ಯವಹಾರವು ಅವರ ದುರಾಡಳಿತಕ್ಕೆ ಸಾಕ್ಷಿಯಾಗಿದೆ.

ಮತ್ತೊಂದು ಬೆಳವಣಿಗೆಯಲ್ಲಿ, ಮರಿಗೌಡ ಅವರ ಪತ್ನಿ, ಶಿಕ್ಷಕಿ ಜಯಶ್ರೀ ಅವರು ಇತ್ತೀಚೆಗೆ ಮೈಸೂರಿನ ದಟ್ಟಗಳ್ಳಿ ಪ್ರದೇಶದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಬಂಗಲೆ ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಆರಂಭದಲ್ಲಿ ಮುಡಾ ವಿಚಾರಗಳನ್ನು ಪ್ರಸ್ತಾಪಿಸಿದ ಬಿಜೆಪಿ ಎಂಎಲ್ಸಿ ಅಡಗೂರು ವಿಶ್ವನಾಥ್ ಅವರು ಮರಿಗೌಡ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಮುಡಾ ಕಾರ್ಯಾಚರಣೆಯಲ್ಲಿ ಮರೀಗೌಡ ಪಾರದರ್ಶಕತೆ ಹೊಂದಿಲ್ಲ ಎಂದು ಆರೋಪಿಸಿರುವ ವಿಶ್ವನಾಥ್, ಮೈಸೂರಿನಲ್ಲಿ 50x80 ನಿವೇಶನದಲ್ಲಿ ಮನೆ ನಿರ್ಮಾಣ ಮಾಡುತ್ತಿದ್ದು, ಬೆಂಗಳೂರಿನಲ್ಲಿ ಹೆಚ್ಚುವರಿ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ವಿಶ್ವನಾಥ್ ಆರೋಪಕ್ಕೆ ಪ್ರತಿಯಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ವಿಶ್ವನಾಥ್ ಯಾವುದೇ ರೀತಿಯ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದಾರೆ. ಮುಡಾ ನಿವೇಶನ ಹಂಚಿಕೆ ವಿವಾದ ಮತ್ತು ಮಾಧ್ಯಮಗಳ ತೀವ್ರ ವರದಿಯಿಂದ,ವಿಶೇಷವಾಗಿ ಮೈಸೂರಿಗೆ ಬಿಜೆಪಿ ಪಾದಯಾತ್ರೆಯ ನಂತರ ಮರೀಗೌಡ ತೀವ್ರ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆ. ಮರಿಗೌಡ
ಮುಡಾ ಅಧ್ಯಕ್ಷ ಬಕ್ರ, ದಡ್ಡಶಿಕಾಮಣಿ- ಪ್ರತಾಪ್ ಸಿಂಹ; ವಾಮಮಾರ್ಗದಲ್ಲಿ ಸಿಂಹ ಸೈಟ್ ಪಡೆದಿದ್ದಾರೆ- ಮರಿಗೌಡ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com