ರಾಜ್ಯದಲ್ಲಿ ಡೆಂಗ್ಯೂ ಅಬ್ಬರ: ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ; ರೂಲ್ಸ್ ಉಲ್ಲಂಘಿಸಿದವರಿಗೆ ದಂಡ

ಬೆಂಗಳೂರಿನಲ್ಲಿರುವ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಇತರ ಜಿಲ್ಲೆಗಳಲ್ಲಿ ಡಿಸಿಗಳಿಗೆ ಖಾಲಿ ನಿವೇಶನಗಳನ್ನು ಪರಿಶೀಲಿಸಲು, ನೋಟಿಸ್‌ಗಳನ್ನು ನೀಡಲು ಹಾಗೂ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿಯೂ ಹೆಚ್ಚಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಡೆಂಗ್ಯೂ ಅಬ್ಬರ ಜೋರಾಗಿದ್ದು, ರಾಜ್ಯದ ವಿವಿಧೆಡೆ ಸಾವುಗಳು ಕೂಡ ಸಂಭವಿಸುತ್ತಿದೆ. ಹಿಂದಿನ ಕಳೆದ ಕೆಲವು ವರ್ಷಗಳಿಗಿಂತ ಈ ಬಾರಿ ಡೆಂಗ್ಯೂ ಜ್ವರ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ.

ರಾಜ್ಯ ಸರ್ಕಾರ ಮಂಗಳವಾರ ಡೆಂಗ್ಯೂ ಜ್ವರವನ್ನು'ಸಾಂಕ್ರಾಮಿಕ' ಎಂದು ಘೋಷಿಸಿದೆ. ಡೆಂಗ್ಯೂ ಮತ್ತು ಇತರ ರೋಗಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ, ಸರ್ಕಾರವು ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಮಗಳು, 2020 ನಿಯಮವನ್ನು ತಿದ್ದುಪಡಿ ಮಾಡಿದ್ದು ಕಠಿಣ ಕ್ರಮಕ್ಕೆ ಮುಂದಾಗಿದೆ. ಎಲ್ಲಾ ಭೂಮಾಲೀಕರು, ಬಿಲ್ಡರ್‌ಗಳು ತಮ್ಮ ಆವರಣದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಿಯಮಗಳನ್ನು ಅನುಸರಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅಧಿಕೃತ ಅಧಿಕಾರಿಗಳು ಖಾಲಿ ಸ್ಥಳಗಳು, ಕಟ್ಟಡಗಳು, ನೀರಿನ ಟ್ಯಾಂಕ್‌ಗಳು, ಉದ್ಯಾನವನಗಳು ಮತ್ತು ಆಟದ ಮೈದಾನಗಳನ್ನು ನಿಯಮಿತವಾಗಿ ತಪಾಸಣೆಗಳನ್ನು ನಡೆಸುತ್ತಾರೆ. ಸೊಳ್ಳೆ ತಡೆಗಟ್ಟುವ ಕ್ರಮಗಳನ್ನು ಅನುಸರಿಸಲು ವಿಫಲವಾದರೆ ಸಕ್ಷಮ ಪ್ರಾಧಿಕಾರದಿಂದ ದಂಡ ವಿಧಿಸಲಾಗುತ್ತದೆ. ಸರ್ಕಾರದ ಈ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಅನುಸರಿಸಲು ಸೂಚಿಸಲಾಗಿದೆ.

ಸಾಂದರ್ಭಿಕ ಚಿತ್ರ
ಡೆಂಗ್ಯೂ ಸಾಂಕ್ರಾಮಿಕ ರೋಗ: ಮಾರ್ಗಸೂಚಿ ಪಾಲಿಸದಿದ್ದರೆ ದಂಡ; ಚಾಮುಂಡಿ ಬೆಟ್ಟದಲ್ಲಿ ಮದ್ಯಪಾನ, ಗುಟ್ಕಾ, ಮೊಬೈಲ್ ನಿಷೇಧ; ಮುಡಾ ಹಗರಣದಲ್ಲಿ ಮೊದಲ ತಲೆದಂಡ!

ಬೆಂಗಳೂರಿನಲ್ಲಿರುವ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಇತರ ಜಿಲ್ಲೆಗಳಲ್ಲಿ ಡಿಸಿಗಳಿಗೆ ಖಾಲಿ ನಿವೇಶನಗಳನ್ನು ಪರಿಶೀಲಿಸಲು, ನೋಟಿಸ್‌ಗಳನ್ನು ನೀಡಲು ಹಾಗೂ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ. ಸೊಳ್ಳೆಗಳ ಉತ್ಪತ್ತಿ ತಾಣಗಳ ನಿವಾರಣೆಗೆ ಮಾಲೀಕರು ತಕ್ಷಣ ಕ್ರಮ ಕೈಗೊಳ್ಳಬೇಕು. ಒಬ್ಬ ವ್ಯಕ್ತಿಯು ಕಾರ್ಯನಿರ್ವಹಿಸಲು ವಿಫಲವಾದರೆ, ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬಹುದು ಮತ್ತು ಸುಸ್ತಿದಾರರಿಂದ ವೆಚ್ಚವನ್ನು ವಸೂಲಿ ಮಾಡಬಹುದು. ಮನೆಗಳಿಗೆ, ನಗರ ಪ್ರದೇಶದಲ್ಲಿ 400 ರೂ. ಮತ್ತು ಗ್ರಾಮೀಣ ಪ್ರದೇಶದಲ್ಲಿ 200 ರೂ. ವಾಣಿಜ್ಯ ಸ್ಥಳಗಳಿಗೆ ನಗರ ಪ್ರದೇಶದಲ್ಲಿ ರೂ 1,000 ಮತ್ತು ಗ್ರಾಮೀಣ ಭಾಗಗಳಲ್ಲಿ ರೂ 500 ದಂಡ ವಿಧಿಸಲಾಗುತ್ತದೆ. ನಿರ್ಮಾಣ ಸ್ಥಳಗಳು ಮತ್ತು ಖಾಲಿ ನಿವೇಶನಗಳಿಗೆ ನಗರ ಪ್ರದೇಶದಲ್ಲಿ ರೂ 2,000 ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ 1,000 ದಂಡ ವಿಧಿಸಲಾಗುತ್ತದೆ. ಪುನರಾವರ್ತಿತ ಅಪರಾಧಗಳಿಗಾಗಿ, ಉಲ್ಲಂಘನೆಯ ಪ್ರತಿ ವಾರಕ್ಕೆ ಒಟ್ಟು ಮೊತ್ತದ 50% ಹೆಚ್ಚುವರಿ ದಂಡವನ್ನು ವಿಧಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com