ವಿಜಯಪುರ: ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಅಪಘಾತ ಸಂಭವಿಸಿದೆ.ನಾಲ್ವರಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು ಸೇರಿ ಒಟ್ಟು ನಾಲ್ವರು ಯುವಕರ ಮೃತಪಟ್ಟಿದ್ದಾರೆ.
ತಾಳಿಕೋಟೆ ತಾಲೂಕಿನ ಗೋಟಖಂಡಕಿ ಗ್ರಾಮದ ಅನಿಲ ಖೈನೂರ (23), ಚೌಡಕಿ (22), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಮೃತ ದುರ್ದೈವಿಗಳಾಗಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement