Bengaluru: ರೈಡ್ ಕ್ಯಾನ್ಸಲ್ ಮಾಡಿದ್ದಕ್ಕೇ ಯುವತಿಗೆ ಕಪಾಳಮೋಕ್ಷ; ಆಟೋ ಚಾಲಕ ಪೊಲೀಸ್ ವಶಕ್ಕೆ, Video

ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋವನ್ನು ಮಾಡಿಕೊಂಡಿದ್ದ ಯುವತಿ, ಸಾಮಾಜಿಕ ಜಾಲತಾಣ ‘ಎಕ್ಸ್​’ನಲ್ಲಿ ಹಂಚಿಕೊಂಡು ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದಳು.
Auto Driver has been apprehended by Magadi Road Police
ಆಟೋ ಚಾಲಕ ಪೊಲೀಸ್ ವಶಕ್ಕೆ
Updated on

ಬೆಂಗಳೂರು: ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ(auto driver) ಕೋಪಗೊಂಡು ಯುವತಿ ಮೇಲೆ ಹಲ್ಲೆ ಮಾಡಿದ್ದ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೌದು.. ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ(auto driver) ಕೋಪಗೊಂಡು ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2ರಂದು ನಡೆದಿತ್ತು.

ಚಾಲಕ ನಿಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದೀಗ ಚಾಲಕನ ವಿರುದ್ಧ ಕ್ರಮ ಕೈಗೊಂಡಿರುವ ಮಾಗಡಿರಸ್ತೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

Auto Driver has been apprehended by Magadi Road Police
ಬೆಂಗಳೂರು: ಓಲಾ ಆಟೋ ಚಾಲಕನಿಂದ ಯುವತಿ ಮೇಲೆ ಹಲ್ಲೆ ಆರೋಪ, ವಿಡಿಯೋ ವೈರಲ್

ಏನಿದು ಪ್ರಕರಣ?

ಯುವತಿ ಹಾಗೂ ಆಕೆಯ ಸ್ನೇಹಿತ ಇಬ್ಬರೂ ಓಲಾ ಆಟೋವನ್ನು ಬುಕ್ ಮಾಡಿದ್ದರು. ಸಕಾಲಕ್ಕೆ ಆಟೋ ಬಾರದ ಹಿನ್ನೆಲೆ ಮತ್ತೊಂದು ಆಟೋವನ್ನು ಬುಕ್ ಮಾಡಿದ್ದಳು. ಬಳಿಕ ಮುಂಚಿತವಾಗಿ ಬಂದ ಆಟೋವನ್ನು ಹತ್ತಿ, ಈ ಹಿಂದೆ ಬುಕ್ ಮಾಡಿದ್ದ ಆಟೋವನ್ನು ರದ್ದು ಮಾಡಿದ್ದಳು. ಇದನ್ನು ಗಮನಿಸದ ಆಟೋ ಚಾಲಕ ಯುವತಿಯನ್ನ ಹಿಂಬಾಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದಾನೆ.

ಇನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋವನ್ನು ಮಾಡಿಕೊಂಡಿದ್ದ ಯುವತಿ, ಸಾಮಾಜಿಕ ಜಾಲತಾಣ ‘ಎಕ್ಸ್​’ನಲ್ಲಿ ಹಂಚಿಕೊಂಡು ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದಳು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪರಿಶೀಲಿಸಿದ ಪೊಲೀಸರು, ಆಟೋ ಚಾಲಕ ಮುತ್ತುರಾಜ್ ಎಂಬಾತನನ್ನ ಕರೆಯಿಸಿ ವಿಚಾರಣೆ ನಡೆಸಿದ್ದಾರೆ.

ಯುವತಿಗೂ ನೋಟಿಸ್

ಅಂತೆಯೇ ಸಂತ್ರಸ್ಥ ಯುವತಿಗೂ ಪೊಲೀಸರು ನೊಟೀಸ್ ನೀಡಿ ವಿಚಾರಣೆಗೆ ಬರಲು ಸೂಚಿಸಿದ್ದಾರೆ.

ಸೂಕ್ತ ಕ್ರಮ ಕೈಗೊಳ್ಳುತ್ತೇವೆ- ಎಡಿಜಿಪಿ ಅಲೋಕ್ ಕುಮಾರ್

ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷಿತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ‘ ಆಟೋ ಚಾಲಕನೊಬ್ಬ ಯುವತಿಯನ್ನ ಅವಾಚ್ಯವಾಗಿ ನಿಂದಿಸಿರುವುದನ್ನು ಒಪ್ಪುವಂತದಲ್ಲ. ಇಂತಹ ಕೆಲ ಆಟೋ ಚಾಲಕರು ಎಲ್ಲರಿಗೂ ಕೆಟ್ಟ ಹೆಸರು ತರುತ್ತಾರೆ. ಚಾಲಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಆಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com