ಬೆಂಗಳೂರು: ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ (The New Indian express newspaper) ಬೆಂಗಳೂರು ಆವೃತ್ತಿಯಲ್ಲಿ ವರದಿ ಬಳಿಕ ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ಬಿಜೆಪಿ ನಾಯಕನಿಗೆ ಸೇರಿದ ಕಟ್ಟಡವೊಂದರ 5 ಅನಧಿಕೃತ ಮಹಡಿಗಳನ್ನು ತೆರವುಗೊಳಿಸಲು ಮುಂದಾಗಿದೆ.
ಜುಲೈ.23 ರಂದು 'BBMP engineers help BJP leader put up unauthorised floors in Bengaluru' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು. ವರದಿ ಬೆನ್ನಲ್ಲೇ ಬಿಬಿಎಂಪಿ ಮುಖ್ಯ ಆಯುಕ್ತರು ವಿಲ್ಸನ್ ಗಾರ್ಡನ್‌ನ ಎಂಜಿನಿಯರ್‌ಗಳು ಮತ್ತು ದಕ್ಷಿಣ ವಲಯ ಆಯುಕ್ತ ವಿನೋದ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಕೂಡಲೇ ಅಕ್ರಮ ನಿರ್ಮಾಣ ತೆರವುಗೊಳಿಸುವಂತೆ ಸೂಚಿಸಿದ್ದಾರೆ.
ಸೂಚನೆ ಬೆನ್ನಲ್ಲೇ ಇಂಜಿನಿಯರ್‌ಗಳು ಸೆ.11ಕ್ಕೆ ಅನಧಿಕೃತ ಮಹಡಿಗಳನ್ನು ಕೆಡವಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾಗೇಂದ್ರ ಅವರು ಮಾತನಾಡಿ, ಬಿಬಿಎಂಪಿ ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಬಿಜೆಪಿ ಮುಖಂಡ ರಮೇಶ್ ಬಾಬು ಅವರಿಗೆ ಸೇರಿದ ಕಟ್ಟಡದಲ್ಲಿ ಅನಧಿಕೃತ ಮಹಡಿಗಳ ನೆಲಸಮಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಟ್ಟಡ ಅನುಮತಿ ವೇಳೆ ರಮೇಶ್ ಬಾಬು ಅವರು 8 ಅಂತಸ್ತಿನ ಕಟ್ಟಡ ನಿರ್ಮಿಸುವುದಾಗಿ ಹೇಳಿದ್ದು, 10 ಅಂತಸ್ತಿನ ಕಟ್ಟಡ ನಿರ್ಮಿಸಿದ್ದಾರೆ. ಈ ವಿಚಾರ ಚಿಕ್ಕಪೇಟೆ ಉಪವಿಭಾಗದ ಕಾರ್ಯಪಾಲಕ ಇಂಜಿನಿಯರ್ ಈರಪ್ಪ ರೆಡ್ಡಿ ಮತ್ತು ಅವರ ಅಧೀನದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿದಿತ್ತು ಎನ್ನಲಾಗಿದೆ.
Advertisement