Accident: ನಿರ್ದೇಶಕ ನಾಗಶೇಖರ್ ಕಾರು ಅಪಘಾತ, ಮಹಿಳೆಗೆ ಗಾಯ

ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಗಶೇಖರ್ ಅವರು ತಮ್ಮ ಕಾರು ಚಾಲನೆ ಮಾಡಿಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ ಬಸ್‌ ತಂಗುದಾಣದಲ್ಲಿ ನಿಂತಿದ್ದ ದೊಡ್ಡಗೊಲ್ಲರಹಟ್ಟಿ ನಿವಾಸಿ ಲಕ್ಷ್ಮೀ ಎಂಬುವವರಿಗೆ ಡಿಕ್ಕಿ ಹೊಡೆದಿದೆ.
Director Nagashekhar injured in road mishap
ನಿರ್ದೇಶಕ ನಾಗಶೇಖರ್
Updated on

ಬೆಂಗಳೂರು: ನಿರ್ದೇಶಕ ಯೋಗರಾಜ್ ಭಟ್ ಪ್ರಕರಣದ ಬೆನ್ನಲ್ಲೇ ಇತ್ತ ಕನ್ನಡದ ಮತ್ತೋರ್ವ ಚಿತ್ರ ನಿರ್ದೇಶಕ ನಾಗಶೇಖರ್ ಕಾರು ಅಪಘಾತಗೀಡಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಹೌದು.. ಚಿತ್ರ ನಿರ್ದೇಶಕ ನಾಗಶೇಖರ್ ಅವರು ಚಾಲನೆ ಮಾಡುತ್ತಿದ್ದ ಬೆಂಜ್‌ ಕಾರು ಅಪಘಾತವಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಗಶೇಖರ್ ಅವರು ತಮ್ಮ ಕಾರು ಚಾಲನೆ ಮಾಡಿಕೊಂಡು ಹೋಗುವ ವೇಳೆ ನಿಯಂತ್ರಣ ತಪ್ಪಿ ಬಸ್‌ ತಂಗುದಾಣದಲ್ಲಿ ನಿಂತಿದ್ದ ದೊಡ್ಡಗೊಲ್ಲರಹಟ್ಟಿ ನಿವಾಸಿ ಲಕ್ಷ್ಮೀ ಎಂಬುವವರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದೆ.

Director Nagashekhar injured in road mishap
'ಮನದ ಕಡಲು' ಚಿತ್ರದ ಶೂಟಿಂಗ್​ ವೇಳೆ ಲೈಟ್ ಮ್ಯಾನ್ ಸಾವು: ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ FIR

‘ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆಯನ್ನು ನಾಗಶೇಖರ್‌ ಅವರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಠಾಣೆಗೆ ಬಂದು ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

Director Nagashekhar injured in road mishap
ರಸ್ತೆ ಅಪಘಾತ, 2 ಮಕ್ಕಳ ಸಾವು, 3 ಮಕ್ಕಳ ಕಾಲು ತುಂಡು!; ರೇಣುಕಾಸ್ವಾಮಿ ಮೇಲಿನ ಹಲ್ಲೆಯ ಫೋಟೋಗಳು ಬಹಿರಂಗ; ಶಿಕ್ಷಕನಿಗೆ ನೀಡಿದ್ದ ಪ್ರಶಸ್ತಿ ತಡೆ ಹಿಡಿದ ರಾಜ್ಯ ಸರ್ಕಾರ, ವ್ಯಾಪಕ ಟೀಕೆ; ಇವು ಇಂದಿನ ಪ್ರಮುಖ ಸುದ್ದಿಗಳು 05-09-2024

ಜ್ಞಾನ ಭಾರತಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಅಕ್ಕಪಕ್ಕದ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಿದಾಗ ಕಾರಿನಲ್ಲಿ ವೇಗವಾಗಿ ಬಂದು ಮಹಿಳೆಯೊಬ್ಬರಿಗೆ ತಾಗಿಸಿ ನಂತರ ನಿಯಂತ್ರಣ ತಪ್ಪಿ ರಭಸವಾಗಿ ಬಂದು ಮರಕ್ಕೆ ಗುದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕಾರು ಯಾರೆಂಬುದನ್ನು ಗುರುತಿಸಿದ ಪೊಲೀಸರು ನಿರ್ದೇಶಕ ನಾಗಶೇಖರ್ ಅವರ ಬೆಂಜ್ ಕಾರನ್ನು ವಶಕ್ಕೆ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com