ಪೋಕ್ಸೋ ಕೇಸು ರದ್ದುಪಡಿಸುವಂತೆ ಕೋಲಾರ ಮೂಲದ ಶಿಕ್ಷಕ ಮೊರೆ: ಹೈಕೋರ್ಟ್ ವಜಾ

ಕೋಲಾರ ಜಿಲ್ಲೆಯ ಹಿಂದುಳಿದ ಸಮುದಾಯಗಳ ಮಕ್ಕಳ ವಸತಿ ಶಾಲೆಯ ಶಿಕ್ಷಕನಾಗಿರುವ ಆರೋಪಿ ಪೋಕ್ಸೊ ಕಾಯ್ದೆಯಡಿ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿದ್ದಾನೆ.
ಹೈಕೋರ್ಟ್
ಹೈಕೋರ್ಟ್
Updated on

ಬೆಂಗಳೂರು: ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುತ್ತಿರುವಾಗ ಅವರ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕನ ವಿರುದ್ಧದ ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.

ಕೋಲಾರ ಜಿಲ್ಲೆಯ ಹಿಂದುಳಿದ ಸಮುದಾಯಗಳ ಮಕ್ಕಳ ವಸತಿ ಶಾಲೆಯ ಶಿಕ್ಷಕನಾಗಿರುವ ಆರೋಪಿ ಪೋಕ್ಸೊ ಕಾಯ್ದೆಯಡಿ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿದ್ದಾನೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಾವು ನೀಡಿದ ಇತ್ತೀಚಿನ ತೀರ್ಪಿನಲ್ಲಿ, ಶಿಕ್ಷಕನ ವರ್ತನೆ ಅಮಾನುಷವಾಗಿದ್ದು, ಪ್ರಕರಣದ ಗಂಭೀರತೆಯನ್ನು ಎತ್ತಿ ತೋರಿಸಿದರು.

ಹೈಕೋರ್ಟ್
ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಸೇರಿ ಇಬ್ಬರು ಶಿಕ್ಷಕರ ಅಮಾನತು

ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ರಹಸ್ಯವಾಗಿ ರೆಕಾರ್ಡ್ ಮಾಡಲು ಮೊಬೈಲ್ ಫೋನ್‌ಗಳನ್ನು ಬಳಸಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿ ಕಳೆದ ವರ್ಷ ಡಿಸೆಂಬರ್ ನಲ್ಲಿ ಶಿಕ್ಷಕನ ಬಂಧನವಾಗಿತ್ತು. ಶಿಕ್ಷಕನ ಬಳಿ 5 ಬೇರೆ ಬೇರೆ ಮೊಬೈಲ್ ಫೋನ್‌ಗಳು ಪತ್ತೆಯಾಗಿದ್ದು, ಅವೆಲ್ಲವನ್ನೂ ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿತ್ತು.

ಪ್ರತಿ ಮೊಬೈಲ್ ನಲ್ಲಿ ಸುಮಾರು ಸಾವಿರ ಫೋಟೋ ಮತ್ತು ವಿಡಿಯೊಗಳಿದ್ದವು. ಪೋಕ್ಸೊ ಕಾಯ್ದೆಯಡಿ ಲೈಂಗಿಕ ಕಿರುಕುಳ ಕೇಸನ್ನು ರದ್ದುಪಡಿಸಬೇಕೆಂದು ಶಿಕ್ಷಕ ಕೋರ್ಟ್ ನ ಮೊರೆ ಹೋಗಿದ್ದನು. ಹೈಕೋರ್ಟ್ ಅದನ್ನು ತಿರಸ್ಕರಿಸಿತ್ತು. ಇಂತಹ ವರ್ತನೆ ಪೋಕ್ಸೋ ಕಾಯ್ದೆಯಡಿ ಲೈಂಗಿಕ ಕಿರುಕುಳ ಕೇಸು ಆಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com