ರಾಯಚೂರು ಶಾಲಾ ಬಸ್ ಅಪಘಾತ ಪ್ರಕರಣ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತ ಮಕ್ಕಳಿಗೆ 5 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರಧನವನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಮಂಜುನಾಥ, ಮಧುಶ್ರೀ, ಚಾಲಕ ಬಲವಂತ ಮೂವರು ತ್ರೀವವಾಗಿ ಗಾಯಗೊಂಡಿದ್ದಾರೆ.
ಗಾಯಾಳು ಬಾಲಕನ ಆರೋಗ್ಯ ವಿಚಾರಿಸುತ್ತಿರುವ ಸಚಿವ ಶರಣಪ್ರಕಾಶ್ ಪಾಟೀಲ್.
ಗಾಯಾಳು ಬಾಲಕನ ಆರೋಗ್ಯ ವಿಚಾರಿಸುತ್ತಿರುವ ಸಚಿವ ಶರಣಪ್ರಕಾಶ್ ಪಾಟೀಲ್.
Updated on

ರಾಯಚೂರು: ಖಾಸಗಿ ಶಾಲಾ ಬಸ್​ ಮತ್ತು ಸಾರಿಗೆ ಬಸ್​​ ನಡುವಿನ ಭೀಕರ ರಸ್ತೆ ಅಪಘಾತ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಶುಕ್ರವಾಹ ರಿಮ್ಸ್​ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಮಾನವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಗುರುವಾರ ಖಾಸಗಿ ಬಸ್ ಮತ್ತು ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶಾಲಾ ಬಸ್‌ನಲ್ಲಿದ್ದ 40 ವಿದ್ಯಾರ್ಥಿಗಳಲ್ಲಿ ಚಾಲಕ ಸೇರಿ 17 ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಶ್ರೀಕಾಂತ್​, ಸಮರ್ಥ ಎಂಬಿಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, 23 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲಾ ಬಸ್ ಚಾಲಕ, ಇನ್ನಿಬ್ಬರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಗಾಯಗೊಂಡಿರುವವರಿಗೆ ನೀಡುತ್ತಿರುವ ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತ‌ನಾಡಿದ ಸಚಿವರು, ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತ ಮಕ್ಕಳಿಗೆ 5 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರಧನವನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಮಂಜುನಾಥ, ಮಧುಶ್ರೀ, ಚಾಲಕ ಬಲವಂತ ಮೂವರು ತ್ರೀವವಾಗಿ ಗಾಯಗೊಂಡಿದ್ದಾರೆ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ತೀವ್ರ ನಿಗಾ ವಹಿಸಲಾಗಿದೆ.

ಗಾಯಾಳು ಬಾಲಕನ ಆರೋಗ್ಯ ವಿಚಾರಿಸುತ್ತಿರುವ ಸಚಿವ ಶರಣಪ್ರಕಾಶ್ ಪಾಟೀಲ್.
ರಾಯಚೂರು: ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ, ಇಬ್ಬರು ಮಕ್ಕಳು ಸಾವು, ಹಲವು ವಿದ್ಯಾರ್ಥಿಗಳಿಗೆ ಗಾಯ

ನಂದೀಶ್ ಎನ್ನುವ ವಿದ್ಯಾರ್ಥಿಯ ಕೈ ಮುರಿತ ಹಾಗೂ ಚಾಲಕ ಬಲವಂತನಿಗೆ ಕಾಲು ಮುರಿತವಾಗಿದೆ. ಅವರಿಗೆ ಸೂಕ್ತವಾದ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ನಡೆದ ಸ್ಥಳದ ರಸ್ತೆಯನ್ನು ಕೆಆರ್‌ಡಿಎಲ್​ಗೆ ಹಸ್ತಾಂತರಿಸಲಾಗಿದೆ. ರಸ್ತೆಯಲ್ಲಿ ತಗ್ಗು, ಗುಂಡಿಗಳು, ಹಾಳಾಗಿರುವುದು ಸೇರಿದಂತೆ ಎಲ್ಲ ಮಾಹಿತಿಯ ವರದಿಯನ್ನು ಜಿಲ್ಲಾಧಿಕಾರಿಗೆ ನೀಡುವಂತೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ನಂತರ ಸಚಿವರು ಕುರ್ಡಿ ಗ್ರಾಮಕ್ಕೂ ಭೇಟಿ ನೀಡಿ ಮೃತ ಮಕ್ಕಳಾದ ಸಮರ್ಥ್ (7) ಮತ್ತು ಶ್ರೀಕಾಂತ್ (12) ಕುಟುಂಬಗಳಿಗೆ ಸಾಂತ್ವನ ಹೇಳಿದರು. ಇದೇ ವೇಳೆ 5 ಲಕ್ಷ ಪರಿಹಾರದ ಚೆಕ್ ನ್ನೂ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಹಂಪಣಗೌಡ, ಎ.ವಸಂತ ಕುಮಾರ್, ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳು, ರಾಯಚೂರು ಸಹಾಯಕ‌ ಆಯುಕ್ತರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ರಿಮ್ಸ್ ನಿರ್ದೇಶಕರು, ಆಡಳಿತಾಧಿಕಾರಿಗಳು ಸೇರದಂತೆ ಇತರೆ ಅಧಿಕಾರಿಗಳು‌ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com