ಮಂಗಳೂರು: ಸುಂದರ ಕನಸು ಕಟ್ಟಿಕೊಂಡು ಎರಡು ದಿನಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಬಳಿ ನಡೆದಿದೆ.
ಪೆರ್ನೆ ಸಮೀಪದ ಒಡ್ಯ ನಿವಾಸಿ ತರುಣ ಅನಿಶ್ ಕೃಷ್ಣ ತಮ್ಮ ಪತ್ನಿ ಮಾನಸ ಜೊತೆ ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಗುದ್ದಿ ಹಾರಿ ಕೆಎಸ್ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಮಾನಸ ಸ್ಥಳದಲ್ಲಿಯೇ ಅಸುನೀಗಿದ್ದು, ಗಂಭೀರ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊನ್ನೆ 5ರಂದು ಇವರಿಬ್ಬರ ವಿವಾಹ ದೇಂತಡ್ಕ ದೇವಸ್ಥಾನದಲ್ಲಿ ನೆರವೇರಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಾಸ್ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಯಿಲ್ ಲೀಕ್ನಿಂದ ಸರಣಿ ಅಪಘಾತ ಸಂಭವಿಸಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಿಂದ ಮರವಂತೆವರೆಗೆ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರವನ್ನು ಬಂದ್ ಮಾಡಿ, ಪೂರ್ವ ಭಾಗದ ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದೆ.
ಟ್ಯಾಂಕರ್ ನಿಂದ ಆಯಿಲ್ ಲೀಕಾದ ಹಿನ್ನೆಲೆಯಲ್ಲಿ ರಸ್ತೆ ಜಾರುತ್ತಿದ್ದು, ಬೈಕ್ ಸವಾರರ ಬೈಕ್ ಟೈಯರ್ಗೆ ಆಯಿಲ್ ತಗುಲಿ ಜಾರಿ ಬೀಳುತ್ತಿದ್ದಾರೆ. ಇಂದು ಮುಂಜಾನೆ 7:30 ಸುಮಾರಿಗೆ ಟ್ಯಾಂಕರ್ ಒಂದರಿಂದ ಆಯಿಲ್ ಲೀಕ್ ಆಗಿರುವ ಶಂಕೆ ವ್ಯಕ್ತವಾಗಿದೆ.
Advertisement