ತುಮಕೂರು: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಾಲಕಿ ಸೇರಿ ಐದು ಮಂದಿ ದುರ್ಮರಣ ಹೊಂದಿದ್ದಾರೆ. ಡಿಕ್ಕಿ ರಭಸಕ್ಕೆ ಎರಡೂ ಕಾರಗಳು ಸಂಪೂರ್ಣ ಜಖಂಗೊಂಡಿದ್ದು ಒಂದೇ ಕುಟುಂಬ ನಾಲ್ವರು ಸೇರಿ ಐವರು ಸಾವನ್ನಪ್ಪಿದ್ದಾರೆ.
ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಕೆಎ-64 M 2627 ನಂಬರಿನ ಟಿಯಾಗೋ ಕಾರು ಹಾಗೂ ಕೆಎ-03 NB 2646 ನಂಬರಿನ ನೆಕ್ಸಾ ಮಾರುತಿ ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನಾಸ್ಥಳಕ್ಕೆ ಮಧುಗಿರಿ ಪಿಎಸ್ಐ ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement