ವಿಜಯಪುರ: ಜಾತ್ರೆ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು!

ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ವಿಜಯಪುರ: ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ದೇವೇಂದ್ರ ಬಡಿಗೇರ್ (24) ಮೃತ ದುರ್ದೈವಿ. ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಂಗ್ರಹ ಚಿತ್ರ
ವಿಜಯಪುರ: ನಿಯಮ ಉಲ್ಲಂಘಿಸಿ ಜಾತ್ರೆ, ಚಕ್ರದಡಿ ಸಿಲುಕಿ ವ್ಯಕ್ತಿ ಸಾವು

ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಕೂಡಲೇ ಗ್ರಾಮಸ್ಥರು ಆತನನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು, ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com