ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಅಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.
ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದ್ದು, ಈ ವೇಳೆ ಮಗು ಆಟವಾಡುತ್ತವೇ ಬಾಟಲ್ ಮುಚ್ಚಳವನ್ನು ಬಾಯಿಗೆ ಹಾಕಿಕೊಂಡಿದೆ. ಕೆಲನಿಮಿಷಗಳಲ್ಲೇ ಮುಚ್ಚಳ ಮಗುವಿನ ಗಂಟಲಲ್ಲಿ ಸಿಕ್ಕಿಹಾಕಿಕೊಂಡಿದ್ದು, ಈ ವೇಳೆ ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ.
ಮುಚ್ಚಳ ನುಗಿ ಒದ್ದಾಡಿದ ಮಗು
ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಟೆಲ್ ಮುಚ್ಚಳ ನುಂಗಿದ ಕೂಡಲೇ ಮಗು ಉಸಿರಾಡಲು ಆಗದೆ ಒದ್ದಾಡಿದೆ, ಜೋರಾಗಿ ಅಳುವ ಸದ್ದು ಕೇಳಿ ಪೋಷಕರು ಬಂದಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಆದಾಗಲೇ ಮಗು ಸಾವನ್ನಪ್ಪಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Advertisement