Renukaswamy Murder Case: ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿ ಸೆ.12 ವರೆಗೆ ವಿಸ್ತರಣೆ

ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.
Actor Darshan
ನಟ ದರ್ಶನ್online desk
Updated on

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ.

ನಟ ದರ್ಶನ್​ ಸೇರಿ ಎಲ್ಲಾ 17 ಆರೋಪಿಗಳ​ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.12ರ ವರೆಗೆ ವಿಸ್ತರಿಸಿ ಕೋರ್ಟ್‌ ಆದೇಶಿಸಿದೆ.

Actor Darshan
ಚಾರ್ಜ್ ಶೀಟ್ ವರದಿಯ ಪ್ರಸಾರಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಹೇರಿ: ನಟ ದರ್ಶನ್ ಹೈಕೋರ್ಟ್ ಮೊರೆ

ಇನ್ನು ಇಂದಿನ ವಿಚಾರಣೆಗೆ ನಟ ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು.

ದರ್ಶನ್​ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12ರಂದು ಇವರು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com