ವಿಜಯಪುರ: ಮುಡಾ ಹಗರಣದಲ್ಲಿ ತನ್ನ ನಿಲುವು ಕುರಿತು ಬಿಜೆಪಿ ವಿಷಾದ ವ್ಯಕ್ತಪಡಿಸಲಿದೆ ಎಂದು ತಳ್ಳಿಹಾಕಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಭಾನುವಾರ ಹೇಳಿದರು.
ಮಮದಾಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ತಳ್ಳಿಹಾಕಿದರು.
ಮುಡಾ ಹಗರಣ ಸಂಬಂಧ ಬಿಜೆಪಿ ತನ್ನ ನಿಲುವಿಗೆ ವಿಷಾದ ವ್ಯಕ್ತಪಡಿಸಲಿದೆ. ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ತೀರ್ಪು ಬರಲಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಅವರ ನಾಯಕತ್ವವನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆಂದು ಹೇಳಿದರು.
ಇದೇ ವೇಳೆ ನಾಯಕತ್ವ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಪುನರುಚ್ಛರಿಸಿದರು.
ಇದೇ ವೇಳೆ ದೆಹಲಿ ಭೇಟಿ ಕುರಿತು ಸ್ಪಷ್ಟನೆ ನೀಡಿದ ಅವರು, ದೆಹಲಿ ಭೇಟಿ ಯಾವುದೇ ರಾಜಕೀಯ ಉದ್ದೇಶಗಳನ್ನು ಹೊಂದಿರಲಿಲ್ಲ. ಕೇಂದ್ರ ಸಚಿವರನ್ನು ಭೇಟಿಯಾಗುವ ಸಲುವಾಗಿ ದೆಹಲಿಗೆ ತೆರಳಿದ್ದೆ. ದೆಹಲಿಗೆ ಹೋದರೇನು ಸಮಸ್ಯೆ? ಕೇಂದ್ರ ಸಚಿವರನ್ನು ಭೇಟಿ ಮಾಡಲು ನಾನು ಅಲ್ಲಿಗೆ ಹೋಗಿದ್ದೆ, ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ತಿಳಿಸಿದರು.
Advertisement