ಮುಡಾ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ: ಸಚಿವ ಭೈರತಿ ಸುರೇಶ್‌

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ತನಿಖೆಗೆ ಸರ್ಕಾರ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನ್ಯಾಯಾಂಗ ಆಯೋಗವನ್ನು ನೇಮಿಸಿದೆ.
ಸಚಿವ ಬೈರತಿ ಸುರೇಶ್‌
ಸಚಿವ ಬೈರತಿ ಸುರೇಶ್‌
Updated on

ಮೈಸೂರು: ಮುಡಾ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಭಾನುವಾರ ಹೇಳಿದರು.

ಚಾಮುಂಡೇಶ್ವರಿ, ಶ್ರೀಕಂಠೇಶ್ವರ, ಗಣಪತಿ, ಸುಬ್ರಹ್ಮಣ್ಯ, ಚಂಡಿಕೇಶ್ವರ, ಪಾರ್ವತಮ್ಮ, ನಾರಾಯಣಸ್ವಾಮಿ‌ ಗುಡಿಗಳಿಗೆ ತೆರಳಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ತನಿಖೆಗೆ ಸರ್ಕಾರ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನ್ಯಾಯಾಂಗ ಆಯೋಗವನ್ನು ನೇಮಿಸಿದೆ. ಆಯೋಗವು ವಿಚಾರಣೆ ಆರಂಭಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ದಾಖಲೆಗಳನ್ನು ಪರಿಶೀಲಿಸುತ್ತಿದೆ. ವರದಿ ಬಂದ ಬಳಿಕ ಹಿಂದಿನ ಆಯುಕ್ತರಾಗಿದ್ದವರೂ ಸೇರಿದಂತೆ ಹಲವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಸಚಿವ ಬೈರತಿ ಸುರೇಶ್‌
ಮುಡಾ ಒಂದೇ ಅಲ್ಲ, ಸಿದ್ದರಾಮಯ್ಯ ವಿರುದ್ಧ ಇನ್ನೂ ಸಾಕಷ್ಟು ಕೇಸ್'ಗಳಿವೆ: ರಮೇಶ್ ಜಿಗಜಿಣಗಿ ಹೊಸ ಬಾಂಬ್

ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ವಿರೋಧಪಕ್ಷಗಳ ಕನಸುಗಳು ನನಸಾಗುವುದಿಲ್ಲ ಎಂದು ತಿಳಿಸಿದರು.

ಪಿ.ಎನ್‌.ದೇಸಾಯಿ ಅವರ ಸಮಿತಿ ಮುಡಾದ ಹಗರಣವನ್ನು ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ತಾವು ಯಾವುದೇ ಹಸ್ತಕ್ಷೇಪ ನಡೆಸುವುದಿಲ್ಲ. ಯಾವುದೇ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ. ಅದು ಬೇರೆಯದೇ ಸ್ವರೂಪ ಪಡೆದುಕೊಳ್ಳುತ್ತದೆ. ವಿರೋಧಪಕ್ಷಗಳು ಅದನ್ನೇ ನೆಪ ಮಾಡಿಕೊಂಡು ಟೀಕೆ ಮಾಡುತ್ತವೆ. ಅದಕ್ಕಾಗಿ ನ್ಯಾಯಾಂಗದ ವರದಿ ಬರುವವರೆಗೂ ಮುಡಾ ಹಗರಣದ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com