ಅಮೆರಿಕಾ ಭೇಟಿ ಖಾಸಗಿ ಪ್ರವಾಸವಷ್ಟೇ, ಯಾರನ್ನೂ ಭೇಟಿಯಾಗುತ್ತಿಲ್ಲ: ಡಿ.ಕೆ ಶಿವಕುಮಾರ್ ಸ್ಪಷ್ಟನೆ

ಅಮೆರಿಕಾ ಪ್ರವಾಸಕ್ಕೆ ಸಂಬಂಧಿಸಿ ಬೇರೆ ರೀತಿಯಲ್ಲಿ ವದಂತಿಗಳು ಹರಿದಾಡುತ್ತಿವೆ. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ.
ಡಿಸಿಎಂ ಡಿಕೆ.ಶಿವಕುಮಾರ್
ಡಿಸಿಎಂ ಡಿಕೆ.ಶಿವಕುಮಾರ್
Updated on

ಬೆಂಗಳೂರು: ಸೆ.8-16ರವರೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದು, ವಾಷಿಂಗ್ಟನ್​​​​​​​​ಗೆ ಭೇಟಿ ನೀಡುತ್ತಿದ್ದಾರೆ.

ಈ ಭೇಟಿ ಕುರಿತು ಹಲವು ಸುದ್ದಿಗಳು ಹರಿದಾಡುತ್ತಿದ್ದು, ವಿಶೇಷ ಆಹ್ವಾನದ ಮೇರೆಗೆ ಡಿಕೆ.ಶಿವಕುಮಾರ್ ಅವರು ಅಮೆರಿಕಾಗೆ ಭೇಟಿ ನೀಡುತ್ತಿದ್ದಾರೆಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ಭೇಟಿ ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶಗಳಿಲ್ಲ ಎಂದು ಹೇಳಿದ್ದಾರೆ.

ಅಮೆರಿಕಾ ಪ್ರವಾಸಕ್ಕೆ ಸಂಬಂಧಿಸಿ ಬೇರೆ ರೀತಿಯಲ್ಲಿ ವದಂತಿಗಳು ಹರಿದಾಡುತ್ತಿವೆ. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ಅವರು ವಿನಂತಿಸಿಕೊಂಡಿದ್ದಾರೆ.

ತಾವು ತಮ್ಮ ಕುಟುಂಬ ಸದಸ್ಯರ ಜತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಡಿಕೆ.ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಅಮೆರಿಕ ಪ್ರವಾಸದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಡಿಕೆ.ಶಿವಕುಮಾರ್ ಅವರು ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಪತ್ರದಲ್ಲಿ ವಾಷಿಂಗ್ಟನ್‌ಗೆ ತೆರಳಿ ಸೆಪ್ಟೆಂಬರ್ 16 ರಂದು ವಾಪಸಾಗುವುದಾಗಿ ತಿಳಿಸಿದ್ದಾರೆ.

ಡಿಸಿಎಂ ಡಿಕೆ.ಶಿವಕುಮಾರ್
Rahul Gandhi ಅಮೆರಿಕ ಪ್ರವಾಸ; ವಿಮಾನನಿಲ್ದಾಣದಲ್ಲಿ ಸ್ವಾಗತ ಕೋರಿದ ಸ್ಯಾಮ್‌ ಪಿತ್ರೋಡಾ

ಶಿವಕುಮಾರ್ ಅವರ ಪ್ರವಾಸದ ವಿವರ ಗೌಪ್ಯವಾಗಿದ್ದು, ಅಮೆರಿಕಾ ಪ್ರವಾಸದ ವೇಳೆ ಡಿಕೆಶಿ ಅವರು ಕಮಲಾ ಹ್ಯಾರಿಸ್ ಅವರನ್ನು ಖಾಸಗಿಯಾಗಿ ಭೇಟಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಶಿವಕುಮಾರ್ ಅವರು ಮಗಳು ಐಶ್ವರ್ಯಾ ಸೇರಿದಂತೆ ಅವರ ಕುಟುಂಬದ ಐವರು ಸದಸ್ಯರೊಂದಿಗೆ ಅಮೆರಿಕಾಗೆ ಭೇಟಿ ನೀಡುತ್ತಿದ್ದಾರೆ. ಡಿಕೆಶಿ ಕುಟುಂಬವು ಕರ್ನಾಟಕದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ಭೇಟಿ ಶೈಕ್ಷಣಿಕ ಅಂಶಗಳ ಉದ್ದೇಶವನ್ನು ಹೊಂದಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಡಿಕೆಶಿ ಕುಟುಂಬವು ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಅವರ ಶೈಕ್ಷಣಿಕ ಪ್ರತಿಷ್ಠಾನದೊಂದಿಗೆ ನಂಟು ಹೊಂದಿದ್ದು, ಶಿವಕುಮಾರ್ ಕೂಡ ಈ ಶೈಕ್ಷಣಿಕ ಸಂಸ್ಥೆಗೆ ಸಹಾಯ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ. ಹೀಗಾಗಿಯೇ ಮೇ. 15ರಂದು ಡಿಕೆ.ಶಿವಕುಮಾರ್ ಅವರ ಜನ್ಮದಿನದಂದು ಫೌಂಡೇಶನ್ ಶುಭಾಶಯಗಳನ್ನು ಕೋರಿತ್ತು

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com