ಮಣಿಪಾಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಮಣಿಪಾಲ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಕುಂದಾಪುರದ ಶಿಕ್ಷಕರೊಬ್ಬರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘೋಷಿಸಿ ಹಿಂಪಡೆದಿರುವುದನ್ನು ವಿರೋಧಿಸಿ ಮನವಿ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲು ಸೆ.6 ರಂದು ಸಿಂಡಿಕೇಟ್ ವೃತ್ತದಲ್ಲಿ ಜಮಾಯಿಸಿದ್ದ ಕೆಲವು ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಪ್ರತಿಕೃತಿ ಮತ್ತು ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಕೃತಿ ದಹಿಸಲು ಮುಂದಾಗಿದ್ದರು.
ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನೆ ನಡೆಸದಂತೆ ತಡೆದರು. ಆದಾಗ್ಯೂ, ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಣಿಪಾಲದಲ್ಲಿ ದೊಡ್ಡ ಸಭೆ, ಮೆರವಣಿಗೆ ನಡೆಸಲು ಬಿಜೆಪಿ ಕಾರ್ಯಕರ್ತರು ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಾರ್ವಜನಿಕವಾಗಿ ಕೃತ್ಯವೆಸಗಿದ ಆರೋಪದಲ್ಲಿ ಪಕ್ಷದ ಕಾರ್ಯಕರ್ತರಾದ ಗಿರೀಶ್ ಅಂಚನ್ ಮತ್ತು ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ.
Advertisement