ಚಿಕ್ಕಮಗಳೂರು: ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಕೋಮು ಸೌಹಾರ್ದತೆ ಸಂದೇಶ ಸಾರಿದ ಮುಸ್ಲಿಂ ಮಹಿಳೆ..!

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ.
ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಜುಬೇಧಾ
ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಜುಬೇಧಾ
Updated on

ಚಿಕ್ಕಮಗಳೂರು: ವಿವಿಧತೆಯಲ್ಲಿ ಏಕತೆ ಸಾರುವ ದೇಶ ಭಾರತ. ಇಲ್ಲಿ ಎಲ್ಲಾ ಧರ್ಮೀಯರು ವಾಸಿಸುತ್ತಿದ್ದಾರೆ. ಪರಸ್ಪರ ಸಾಮರಸ್ಯ, ಬಾಂಧವ್ಯ, ಸಹೋದರತೆ ಇನ್ನು ಕೂಡ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಉದಾಹರಣೆ ಇದೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಭಾವೈಕ್ಯತೆಯ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸಮಾಜಕ್ಕೆ ಸೌಹಾರ್ದತೆಯ ಸಂದೇಶ ಸಾರಿದ್ದಾರೆ.

ಎನ್‌.ಆ‌ರ್.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಟಾಪನೆ ಮಾಡಲಾಗಿರುವ ಗಣೇಶ ಮೂರ್ತಿ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಭಾನುವಾರ ಬೆಳಗ್ಗೆ 9 ಗಂಟೆಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದವರು ಎಲ್ಲರೂ ಒಟ್ಟಾಗಿ ಸೇರಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಭ್ರಮಿಸಿದರು.

ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಈ ಗಣಪನಿಗೆ ಭಾವೈಕ್ಯತೆಯ ಗಣಪ ಎಂದೇ ಹೆಸರಿಡಲಾಗಿದೆ. ಅಲ್ಲದೇ, ಈ ಗಣಪತಿ ಸಮಿತಿಗೆ ಮುಸ್ಲಿಂ ಮಹಿಳೆಯೇ ಅಧ್ಯಕ್ಷೆ ಆಗಿರುವುದು ವಿಶೇಷ.

ಹಿಂದೂ ಮುಸ್ಲಿಮರ ಮಧ್ಯೆ ಅನೇಕ ವಿಚಾರಕ್ಕೆ ಘರ್ಷಣೆಗಳು ನಡೆಯುತ್ತವೆ. ಆದರೆ, ಹಿಂದುಗಳ ಗಣೇಶನದ ಹಬ್ಬವನ್ನು ಸೌಹಾರ್ದ ಸಾರುವಂತೆ ಇಲ್ಲಿ ಆಚರಿಸಲಾಗಿದ್ದು, ಈ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

ಕಳೆದ 14 ವರ್ಷಗಳಿಂದ ಇದೇ ಗ್ರಾಮದ ಮುಸ್ಲಿಂ ಮಹಿಳೆ ಜುಬೇದಾ ಗಣಪತಿ ಸೇವಾ ಸಮಿತಿ ಅಧ್ಯಕ್ಷರಾಗಿ ಹಿಂದೂ ಸಮುದಾಯದರ ಜೊತೆ ಸೇರಿ ಗಣೇಶೋತ್ಸವ ನಡೆಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಗಣೇಶನ ಮೂರ್ತಿಯನ್ನು ತಂದು ಭಾನುವಾರ ಬೆಳಗ್ಗೆ ಪ್ರತಿಷ್ಠಾಪಿಸಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮಕ್ಕಳನ್ನು ಒಂದು ಕಡೆ ಸೇರಿಸಿ ಯಾವುದೇ ತಾರತಮ್ಯವಿಲ್ಲದೇ ಎಲ್ಲರೂ ಒಟ್ಟಾಗಿ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಕ್ಕಳಿಗೂ ಕೂಡ ಭಾವೈಕ್ಯತೆ ಸಂದೇಶವನ್ನು ಸಾರಲಾಗಿದೆ.

ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಜುಬೇಧಾ
ವಿಜಯಪುರ ಪಾಲಿಕೆ ಕಟ್ಟಡದಲ್ಲಿ ರಾತ್ರೋರಾತ್ರಿ ಗಣೇಶ ಪ್ರತಿಷ್ಠಾಪನೆ: ವಿವಾದ ಸೃಷ್ಟಿ

ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಸಮಿತಿಯ ಭಾಗವಾಗಿದ್ದಾರೆ. 14 ವರ್ಷಗಳಿಂದ ನಾವು ರಾಜೀವ್ ನಗರದಲ್ಲಿ ಗಣಪತಿ ಸೇವಾ ಸಮಿತಿ ಮೂಲಕ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸುತ್ತಿದ್ದೇವೆ. ಸಮಿತಿಯ ಸದಸ್ಯರು ಹಿಂದೂ ಸಂಪ್ರದಾಯದಂತೆ ಒಟ್ಟಾಗಿ ಪೂಜೆ ಸಲ್ಲಿಸುತ್ತಾರೆ. ಮೂರು ದಿನಗಳ ಕಾಲ ಹಬ್ಬವನ್ನು ಆಚರಿಲಾಗುತ್ತದೆ. ಈ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತದೆ. ಯಾವ ಧರ್ಮದ ಭೇದವಿಲ್ಲದೇ ಎಲ್ಲರೂ ಗಣೇಶನನ್ನು ಪೂಜಿಸಲಾಗುತ್ತದೆ. ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮಯದಾಯದವರು ಸೇರಿ ಪ್ರತಿವರ್ಷ ಹಬ್ಬ ಆಚರಣೆ ಮಾಡುತ್ತೇವೆಂದು ಎನ್.ಆರ್.ಪುರ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಜುಬೇಧಾ ಅವರು ಹೇಳಿದ್ದಾರೆ.

ಇದೇ ವೇಳೆ ತಮ್ಮ ಸ್ವಾರ್ಥಕ್ಕಾಗಿ ಧರ್ಮದ ಹೆಸರಿನಲ್ಲಿ ಕೋಮುಗಲಭೆ ಎಬ್ಬಿಸುವ ರಾಜಕಾರಣಿಗಳ ಬಗ್ಗೆ ಜುಬೈದಾ ಅವರು ಅಸಮಾಧಾನ ವ್ಯಕ್ತಪಡಿಸಲಿದ್ದು, ಯುವಕರಲ್ಲಿ ಕೋಮು ಸೌಹಾರ್ದತೆಯ ಸಂದೇಶ ನೀಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಮೂರ್ತಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ಮಕ್ಕಳನ್ನು ಒಂದೆಡೆ ಸೇರಿಸುವುದು ಹಾಗೂ ಅವರಲ್ಲಿ ಏಕತೆಯ ಭಾವನೆಗಳನ್ನು ಮೂಡಿಸುವುದು. ಜಾತಿ, ಧರ್ಮ, ಪಂಥಗಳ ಮೀರಿ ಮಕ್ಕಳು ಮೇಲೇರಬೇಕು ಎಂಬ ಸಂದೇಶವನ್ನು ರವಾನಿಸುವುದು ನನ್ನ ಮುಖ್ಯ ಉದ್ದೇಶವಾಗಿದೆ. ಎಲ್ಲರಿಗೂ ದೇವರು ಒಬ್ಬನೇ... ಈ ಸಂದೇಶವನ್ನು ನಾಳಿನ ಆಶಾಕಿರಣವಾಗಿರುವ ಯುವಕರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com