ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು​ ವಿಫಲ ನಂತರ ರಾಮೇಶ್ವರಂ ಕೆಫೆ ಸ್ಫೋಟ: ನಾಲ್ವರ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ

ಮಾರ್ಚ್ 3 ರಂದು ಪ್ರಕರಣದ ತನಿಖೆಯನ್ನು ಆರಂಭಿಸಿದ NIA, “ವಿವಿಧ ರಾಜ್ಯಗಳ ಪೊಲೀಸ್ ಪಡೆಗಳು ಮತ್ತು ಇತರ ಏಜೆನ್ಸಿಗಳ ಸಹಕಾರದೊಂದಿಗೆ ನಾಲ್ವರನ್ನು ಬಂಧಿಸಿತ್ತು.
Rameshwaram Cafe Blast
ರಾಮೇಶ್ವರಂ ಕೆಫೆ
Updated on

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ನಾಲ್ವರು ಆರೋಪಿಗಳಾದ ಮುಸ್ಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಶರೀಫ್ ವಿರುದ್ಧ ಸೋಮವಾರ ಚಾರ್ಜ್ ಶೀಟ್ ಸಲ್ಲಿಸಿದೆ.

ಆರೋಪಿಗಳ ವಿರುದ್ಧ ಹಿಂದಿನ ಅಧಿಕೃತ ಕ್ರಿಮಿನಲ್ ಕೋಡ್ - ಭಾರತೀಯ ದಂಡ ಸಂಹಿತೆ(IPC), ಕಾನೂನುಬಾಹಿರ ಚಟುವಟಿಕೆಗಳು(ತಡೆಗಟ್ಟುವಿಕೆ) ಕಾಯಿದೆ(UA (P)A, ಸ್ಫೋಟಕ ವಸ್ತುಗಳ ಕಾಯಿದೆ(ESA) ಮತ್ತು ವಿನಾಶ ತಡೆಗಟ್ಟುವಿಕೆ (PDLP) ಕಾಯಿದೆ ಅಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಈ ವರ್ಷ ಮಾರ್ಚ್ 1 ರಂದು ಸಂಭವಿಸಿದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು ಮತ್ತು ಹೋಟೆಲ್ ವ್ಯಾಪಕ ಹಾನಿಯಾಗಿತ್ತು.

ಮಾರ್ಚ್ 3 ರಂದು ಪ್ರಕರಣದ ತನಿಖೆಯನ್ನು ಆರಂಭಿಸಿದ NIA, “ವಿವಿಧ ರಾಜ್ಯಗಳ ಪೊಲೀಸ್ ಪಡೆಗಳು ಮತ್ತು ಇತರ ಏಜೆನ್ಸಿಗಳ ಸಹಕಾರದೊಂದಿಗೆ ನಾಲ್ವರನ್ನು ಬಂಧಿಸಿತ್ತು.

Rameshwaram Cafe Blast
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಆರೋಪಿಗಳ ಕರೆತಂದು NIA ಸ್ಥಳ ಮಹಜರು

ಇಂದು ಈ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ, 2024ರ ಜ.22ರಂದು ಅಯೋಧ್ಯೆಯಲ್ಲಿ ನಡೆದಿದ್ದ ಪ್ರಾಣಪ್ರತಿಷ್ಠಾಪನೆ ಸಮಾರಂಭ ದಿನದಂದು ಕರ್ನಾಟಕದ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಪ್ಲ್ಯಾನ್​ ವಿಫಲವಾದ ಹಿನ್ನೆಲೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಲು ಪ್ಲ್ಯಾನ್​ ಮಾಡಿದ್ದರು. ಅದರಂತೆ ಆರೋಪಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಿದ್ದಾರೆ ಎಂದು ಎನ್​ಐಎ ವಿಶೇಷ ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​​ಶೀಟ್​​​ನಲ್ಲಿ ಉಲ್ಲೇಖಿಸಲಾಗಿದೆ.

“ಶಿವಮೊಗ್ಗ ಜಿಲ್ಲೆಯವರಾದ ಇಬ್ಬರು ವ್ಯಕ್ತಿಗಳು(ಶಾಜಿಬ್ ಮತ್ತು ತಾಹಾ), ಐಸಿಸ್ ಮೂಲಭೂತವಾದಿಗಳಾಗಿದ್ದು, ಈ ಹಿಂದೆ ಸಿರಿಯಾದ ಐಸಿಸ್ ಪ್ರದೇಶಗಳಿಗೆ ವಲಸೆ ಹೋಗಲು ಸಂಚು ರೂಪಿಸಿದ್ದರು. ಅಲ್ಲದೆ ಇತರ ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೆಳೆಯುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಮತ್ತು ಅಂತಹ ಯುವಕರಲ್ಲಿ ಅಹ್ಮದ್ ಮತ್ತು ಶರೀಫ್ ಕೂಡ ಸೇರಿದ್ದಾರೆ ಎಂದು ಕೇಂದ್ರ ಭಯೋತ್ಪಾದನಾ ನಿಗ್ರಹ ಸಂಸ್ಥೆ ಹೇಳಿದೆ.

“ಡಾರ್ಕ್ ವೆಬ್‌ನಿಂದ ಡೌನ್‌ಲೋಡ್ ಮಾಡಲಾದ ಭಾರತದ ಮತ್ತು ಬಾಂಗ್ಲಾದೇಶದ ವಿವಿಧ ಗುರುತಿನ ದಾಖಲೆಗಳ ಜೊತೆಗೆ ಮೋಸದಿಂದ ಪಡೆದ ಭಾರತೀಯ ಸಿಮ್ ಕಾರ್ಡ್‌ಗಳು ಮತ್ತು ಭಾರತೀಯ ಬ್ಯಾಂಕ್ ಖಾತೆಗಳನ್ನು ತಾಹಾ ಮತ್ತು ಶಾಜಿಬ್ ಬಳಸಿದ್ದಾರೆ ಎಂದು ಎನ್ಐಎ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com