ಬೆಂಗಳೂರು: ಬೆಂಗಳೂರಿನ ಖಾಸಗಿ ಕಾಲೇಜಿನ ಮೈದಾನದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ದಾಂಧಲೆ ನಡೆಸಿದ್ದಾರೆ ಎಂದು ವರದಿಯಾಗಿದ್ದು, ಈ ಕುರಿತು ಬೆಂಗಳೂರು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ವರ್ತೂರಿನ ಸರ್ಜಾಪುರದಲ್ಲಿರುವ ಖಾಸಗಿ ಕಾಲೇಜಿನ ಮೈದಾನದಲ್ಲಿ ಅನುಮತಿ ಪಡೆಯದೇ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು.
ದೊಡ್ಡ ದೊಡ್ಡ ಸ್ಪೀಕರ್ ಗಳ ಮೂಲಕ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 4 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದು, ಈ ಪೈಕಿ ಅಕ್ರಮ ಬಾಂಗ್ಲಾ ವಲಸಿಗರು ಕೂಡ ಸೇರಿದ್ದರು ಎಂದು ವರದಿಯಲ್ಲಿ ಆರೋಪಿಸಲಾಗಿದೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರ್ಯಕ್ರಮ ಆಯೋಜಕರನ್ನು ಪ್ರಶ್ನಿಸಿ, ಕಾರ್ಯಕ್ರಮ ನಿಲ್ಲಿಸುವಂತೆ ಕೇಳಿದ್ದಾರೆ. ಈ ವೇಳೆ ಅಲ್ಲಿದ್ದ ಕೆಲ ಪುಂಡರು ಪೊಲೀಸರೊಂದಿಗೇ ವಾಗ್ವಾದ ನಡೆಸಿದ್ದು ಮಾತ್ರವಲ್ಲದೇ ಈ ವೇಳೆ ಅಲ್ಲಿದ್ದ ಕುರ್ಚಿ-ಪಿಠೋಪಕರಣಗಳನ್ನು ಧ್ವಂಸ ಮಾಡಿ ದಾಂಧಲೆ ನಡೆಸಿದ್ದಾರೆ.
ಪೊಲೀಸರ ಸ್ಪಷ್ಟನೆ
ಇನ್ನು ಈ ಪ್ರಕರಣ ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಈ ಕುರಿತು ಎಕ್ಸ್ ನಲ್ಲಿ ಸ್ಪಷ್ಟನೆ ನೀಡಿರುವ ಬೆಂಗಳೂರು ಪೊಲೀಸರು, 'ವರ್ತೂರು ಪೊಲೀಸ್ ಠಾಣೆಯ ಸರಹದ್ದಿನಲ್ಲಿ 08.09.24 ರಂದು ನಡೆದ ಅಸ್ಸಾಂ ರಾಜ್ಯ ಬುಡಕಟ್ಟುಜನರ ಸಂಸ್ಕ್ರತಿ ಹಬ್ಬ ಆಚರಿಸುವ ಸಂಬಂಧ 500 ಜನ ಸೇರುವುದಾಗಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು 2-3 ಸಾವಿರ ಜನ ಸೇರಿ ತಳ್ಳಾಟ ಉಂಟಾಗಿರುತ್ತದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಇರುವುದನ್ನು ಮನಗಂಡು ಕಾರ್ಯಕ್ರಮವನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿ ಕಾರ್ಯಕ್ರಮಕ್ಕೆ ನೀಡಲಾಗಿದ್ದ ಅನುಮತಿಯನ್ನು ರದ್ದುಪಡಿಸಲಾಗಿರುತ್ತದೆ ಎಂದಿದ್ದಾರೆ.
ಅಲ್ಲದೆ ಕಾರ್ಯಕ್ರಮ ಆಯೋಜಕರು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಕಾರ್ಯಕ್ರಮಕ್ಕೆ ಬಂದಿದ್ದ ಜನರು ನಿರಾಶೆಯಿಂದಾಗಿ ಸ್ಥಳವನ್ನು ತೊರೆಯಲು ನಿರಾಕರಿಸಿರುತ್ತಾರೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಇರುವುದನ್ನು ಮನಗಂಡು ಕಾರ್ಯಕ್ರಮವನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿ ಕಾರ್ಯಕ್ರಮಕ್ಕೆ ನೀಡಲಾಗಿದ್ದ ಅನುಮತಿಯನ್ನು ರದ್ದಪಡಿಸಲಾಗಿರುತ್ತದೆ. ಆಯೋಜಕರು ಸರಿಯಾದ ವ್ಯವಸ್ಥೆ ಕಲ್ಪಿಸದ ಕಾರಣ ಕಾರ್ಯಕ್ರಮಕ್ಕೆ ಬಂದಿದ್ದ ಜನರು ನಿರಾಶೆಯಿಂದಾಗಿ ಸ್ಥಳವನ್ನು ತೊರೆಯಲು ನಿರಾಕರಿಸಿರುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.
Advertisement