ಮಂಗಳೂರು ಬಳಿ ಆಟೋ ಡಿಕ್ಕಿ ಹೊಡೆದು ಮಹಿಳೆ ಬಿದ್ದ ಘಟನೆ: ಬಾಲಕಿ ಸಮಯಪ್ರಜ್ಞೆಗೆ ಸಿಎಂ ಶ್ಲಾಘನೆ

ಮಹಿಳೆಗೆ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿನ್ನಿಗೋಳಿ ರಾಜರತ್ನಾಪುರ ನಿವಾಸಿ ಚೇತನ ಗಾಯಾಳು ಆಗಿದ್ದಾರೆ.
ಆಟೋ ಎತ್ತಿದ ಬಾಲಕಿ
ಆಟೋ ಎತ್ತಿದ ಬಾಲಕಿ
Updated on

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಆಟೋವೊಂದು ಡಿಕ್ಕಿ ಹೊಡೆದಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.

ಮಹಿಳೆಗೆ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿನ್ನಿಗೋಳಿ ರಾಜರತ್ನಾಪುರ ನಿವಾಸಿ ಚೇತನ ಗಾಯಾಳು ಆಗಿದ್ದಾರೆ.

ಆಟೋದ ಕೆಳಗೆ ಬಿದ್ದ ಮಹಿಳೆಯನ್ನು ಅಲ್ಲೇ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಯಾರ ಸಹಾಯಕ್ಕೂ ಕಾಯದೆ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಮಹಿಳೆಯ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದು ಕೂಡ ಸುದ್ದಿಯಾಗಿತ್ತು, ಬಾಲಕಿಯ ಸಮಯಪ್ರಜ್ಞೆ, ಧೈರ್ಯಕ್ಕೆ ನಾಡಿನಾದ್ಯಂತ ಜನರು ಶ್ಲಾಘಿಸುತ್ತಿದ್ದಾರೆ.

ಈ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಸಹ ಬಂದಿದ್ದು, ಬಾಲಕಿಯ ಸಮಯಪ್ರಜ್ಞೆ, ಬುದ್ಧಿವಂತಿಕೆ ಮತ್ತು ಧೈರ್ಯಕ್ಕೆ ಮನಸಾರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಪಘಾತ ಸಂಭವಿಸಿದ ಸ್ಥಳಗಳಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಜನರು ಸುತ್ತಲೂ ನಿಂತು ಮೊಬೈಲ್ ಮೂಲಕ ವೀಡಿಯೋ ಮಾಡುವುದನ್ನು ಹಲವು ಬಾರಿ ಮಾಧ್ಯಮಗಳಲ್ಲಿ ಕಂಡಿದ್ದೆ, ಇದು ಭವಿಷ್ಯದ ದಿನಗಳ ಬಗ್ಗೆ ನನ್ನಲ್ಲಿ ಆತಂಕವನ್ನೂ ಮೂಡಿಸಿತ್ತು. ಈ ಪುಟ್ಟ ಬಾಲಕಿಯ ಕಾರ್ಯ ಇಡೀ ಸಮಾಜಕ್ಕೊಂದು ಸಂದೇಶ ರವಾನಿಸಿದಂತಿದೆ.

ಅಪಘಾತ, ಬೆಂಕಿ ಅನಾಹುತ, ಹೃದಯಾಘಾತ ಇಂತಹ ತುರ್ತು ಸಂದರ್ಭದಲ್ಲಿ ಸಂತ್ರಸ್ತರ ಪಾಲಿಗೆ ಪ್ರತಿ ಸೆಕೆಂಡ್ ಕೂಡ ಅಮೂಲ್ಯ. ಈ ವೇಳೆ ಮಾನವೀಯತೆ ಮರೆಯದಿರಿ ಎಂದು ಸಿಎಂ ಸಿದ್ದರಾಮಯ್ಯನವರು ಜನತೆಗೆ ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com