ಅನ್ನಭಾಗ್ಯ ಯೋಜನೆ: ಅಕ್ಕಿ ಕೊಟ್ಟರೂ ಖರೀದಿಗೆ ಕರ್ನಾಟಕ ಸಿದ್ಧವಿಲ್ಲ- ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅಗತ್ಯವಿರುವ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಕೆಜಿಗೆ 28 ​​ರೂ.ಗೆ ಮಾರಾಟ ಮಾಡಲು ಸಿದ್ಧವಿದೆ. ಈ ಬಗ್ಗೆ ತಿಂಗಳ ಹಿಂದೆಯೇ ಮಾಹಿತಿ ನೀಡಲಾಗಿತ್ತು. ಈ ವಿಚಾರ ಮುಖ್ಯ ಕಾರ್ಯದರ್ಶಿಗೂ ತಿಳಿದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದ್ದರೂ, ಕರ್ನಾಟಕ ಸರ್ಕಾರ ಖರೀದಿಗೆ ಮುಂದೆ ಬರುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕಿಡಿಕಾರಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಜೊತೆಗೆ ಮಾತನಾಡಿರುವ ಅವರು, ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಅಗತ್ಯವಿರುವ ಅಕ್ಕಿಯನ್ನು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಕೆಜಿಗೆ 28 ​​ರೂ.ಗೆ ಮಾರಾಟ ಮಾಡಲು ಸಿದ್ಧವಿದೆ. ಈ ಬಗ್ಗೆ ತಿಂಗಳ ಹಿಂದೆಯೇ ಮಾಹಿತಿ ನೀಡಲಾಗಿತ್ತು. ಈ ವಿಚಾರ ಮುಖ್ಯ ಕಾರ್ಯದರ್ಶಿಗೂ ತಿಳಿದಿದೆ. ಆಹಾರ ಸಚಿವ ಮುನಿಯಪ್ಪ ಅವರು ನನ್ನನ್ನ ಭೇಟಿ ಮಾಡಿ, ಅಕ್ಕಿ ಖರೀದಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ್ದರೂ ರಾಜ್ಯ ಸರ್ಕಾರ ಅಕ್ಕಿ ಖರೀದಿಸುವ ಬದಲು ನಗದು ವರ್ಗಾವಣೆ ಮುಂದುವರಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮುನಿಯಪ್ಪ ಅವರ ಪುತ್ರಿ, ಕಾಂಗ್ರೆಸ್ ಶಾಸಕಿ ರೂಪಕಲಾ ಶಶಿಧರ್ ಅವರು ಈಗೇಕೆ ಅವಕಾಶ ನೀಡುತ್ತಿದ್ದಾರೆಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷ ನಮಗೆ ಅಕ್ಕಿಯ ಅವಶ್ಯಕತೆ ಇದ್ದಾಗ ಸಿಎಂ ಸಿದ್ದರಾಮಯ್ಯ ಖುದ್ದು ಮನವಿ ಮಾಡಿದರೂ ಬೆನ್ನು ತಿರುಗಿಸಿದ್ದರು. ಹೀಗಾಗಿ ನಗದು ಹಂಚುವುದನ್ನು ಬಿಟ್ಟು ನಮಗೆ ಬೇರೆ ದಾರಿ ಇರಲಿಲ್ಲ. ಬಡವರಿಗಾಗಿ ಇರುವ ಯೋಜನೆಗಳನ್ನು ಯಾರೂ ರಾಜಕೀಯಗೊಳಿಸಬಾರದು ಎಂದು ತಿಳಿಸಿದ್ದಾರೆ.

ಸಂಗ್ರಹ ಚಿತ್ರ
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧ: ಇನ್ನು ಮುಂದೆ 5 ಕೆಜಿ ಅಕ್ಕಿ ಹಣ ಬಂದ್?

ರಾಷ್ಟ್ರೀಯ ಆಹಾರಧಾನ್ಯ ಸಂಗ್ರಹಣೆ ತಜ್ಞರು ಮಾತನಾಡಿ, ಕೇಂದ್ರ ಸರ್ಕಾರದ ಬಳಿ ಇದೀಗದ ಹೆಚ್ಚುವರಿ ಅಕ್ಕಿ ಇದೆ. ಆ ಅಕ್ಕಿಯನ್ನು ಎಥೆನಾಲ್ ಉತ್ಪಾದನೆಗೂ ಬಳಸುತ್ತಿದೆ. ಕಳೆದ ವರ್ಷ ಕೇಂದ್ರದಲ್ಲಿ ಅಕ್ಕಿ ಕೊರತೆ ಇತ್ತು. ಈ ವರ್ಷ ಹೆಚ್ಚುವರಿ ದಾಸ್ತಾನು ಇದೆ ಎಂದು ಹೇಳಿದ್ದಾರೆ.

ಕರ್ನಾಟಕಕ್ಕೆ ಅಕ್ಕಿಯ ಅವಶ್ಯಕತೆ ಇದ್ದಾಗ ಕೇಂದ್ರ ಸರ್ಕಾರ ಅಕ್ಕಿ ನೀಡದಿರುವುದು ಜನರ ಕಣ್ಣು ಕೆಂಪಗಾಗುವಂತೆ ಮಾಡಿತ್ತು. ಇದೀಗ ಹಠಾತ್ ಅಕ್ಕಿ ನೀಡಲು ಮುಂದಾಗಿರುವುದು ಡ್ಯಾಮೇಜ್ ಕಂಟ್ರೋಲ್ ಗಾಗಿ ಎಂಬುದು ಸ್ಪಷ್ಟವಾಗುತ್ತಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಲಾಗಿತ್ತು. ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಮಾಸಿಕ 5 ಕೆಜಿ ಉಚಿತ ಅಕ್ಕಿ ನೀಡುವ ಭರವಸೆ ನೀಡುವ ಅನ್ನ ಭಾಗ್ಯ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಯೋಜನೆಗೆ ಕರ್ನಾಟಕಕ್ಕೆ 2,36,000 ಟನ್ ಅಕ್ಕಿ ಅಗತ್ಯವಿತ್ತು. ಆದರೆ, ಕೇಂದ್ರದಿಂದ ಹೆಚ್ಚುವರಿ 5 ಕೆಜಿ ನೀಡಲು ಸಾಧ್ಯವಿಲ್ಲ ಎಂದಿತ್ತು. ಬಳಿಕ ಹೊರ ರಾಜ್ಯಗಳಿಂದ ಅಕ್ಕಿ ಖರೀದಿಸುವ ಪ್ರಯತ್ನ ನಡೆದಿತ್ತು, ಆದರೆ, ಹೆಚ್ಚುವರಿ ಹಣ ಭರಿಬೇಕಾದ ಸ್ಥಿತಿ ಎದುರಾಗಿದ್ದರಿಂದ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು, ಹಣವನ್ನು ಖಾತೆಗೆ ಜಮಾ ಮಾಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com