ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್​ ಡಿಕ್ಕಿ ಹೊಡೆದು ತಾಯಿ-ಮಗಳು ದುರ್ಮರಣ

ಈ ನಡುವೆ ಪ್ರತಿ ನಿತ್ಯ ಅಪಘಾತ ಸಂಭವಿಸುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತ ದೇಹ ತೆಗೆಯಲು ಬಿಡುವುದಿಲ್ಲ ಎಂದು ಆಗ್ರಹಿಸಿದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ತಿಪಟೂರು: ರಸ್ತೆಯ ಮೂಲಕ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹಾಗೂ ಆಕೆಯ ತಾಯಿ ಮೇಲೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿ ಮೂವರಿಗೆ ಗಂಭೀರವಾದ ಗಾಯವಾಗಿರುವ ಘಟನೆ ತಿಪಟೂರು ತಾಲ್ಲೂಕಿನ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಸೋಮವಾರ ನಡೆದಿದೆ.

ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45), ಹಳೇಪಾಳ್ಯ ಶಾಲೆಯಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವೀಣಾ (13) ಮೃತರು. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಾಲು ಮಾಡಲಾಗಿದೆ.

ಈ ನಡುವೆ ಪ್ರತಿ ನಿತ್ಯ ಅಪಘಾತ ಸಂಭವಿಸುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಮೃತ ದೇಹ ತೆಗೆಯಲು ಬಿಡುವುದಿಲ್ಲ ಎಂದು ಆಗ್ರಹಿಸಿದರು. ರಸ್ತೆ ದಾಟಲು ಅನುಕೂಲವಾಗುವಂತೆ ಸ್ಥಳದಲ್ಲಿ ಅಂಡರ್‌ಪಾಸ್ ನಿರ್ಮಿಸಲು ಎನ್‌ಎಚ್‌ಎಐ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಸಂಗ್ರಹ ಚಿತ್ರ
ಮಂಗಳೂರು: ನವ ವಿವಾಹಿತ ದಂಪತಿ ಸಾಗುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಸಾವು, ಪತಿ ಗಂಭೀರ

ಬಳಿಕ ಸ್ಥಳಕ್ಕೆ ತಹಶೀಲ್ದಾರ್ ಪವನಕುಮಾರ್, ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು.

ಈ ನಡುವೆ ತಿಪಟೂರು ಗ್ರಾಮಾಂತರ ಠಾಣಾ ಪೊಲೀಸರು ಖಾಸಗಿ ಬಸ್ ಚಾಲಕನನ್ನು ಬಂಧನಕ್ಕೊಳಪಡಿಸಿದ್ದು, ಅಜಾಗರೂಕ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com