ಜಾಗತಿಕ ಹೂಡಿಕೆದಾರರ ಸಮಾವೇಶ: ದೆಹಲಿಗೆ ಎಂ.ಬಿ ಪಾಟೀಲ್ ತೆರಳಿದ ಬೆನ್ನಲ್ಲೇ ಸಿಎಂ ಬದಲಾವಣೆ ಗುಸುಗುಸು!

ಸಿಎಂ ಹುದ್ದೆಯ ರೇಸ್‌ನಲ್ಲಿರುವ ಸಚಿವ ಎಂ.ಬಿ ಪಾಟೀಲ್ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.
ಎಂ.ಬಿ ಪಾಟೀಲ್
ಎಂ.ಬಿ ಪಾಟೀಲ್
Updated on

ಬೆಂಗಳೂರು: 2025ರ ಫೆಬ್ರವರಿ 12ರಿಂದ 14ರವರೆಗೆ ಇಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ನಾನಾ ದೇಶಗಳ ರಾಯಭಾರಿಗಳು ಮತ್ತು ಔದ್ಯಮಿಕ ಸಂಘಟನೆಗಳನ್ನು ಭೇಟಿ ಮಾಡಲು ಮತ್ತು ನಿಗದಿತ ರೋಡ್ ಶೋನಲ್ಲಿ ಪಾಲ್ಗೊಳ್ಳಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೋಮವಾರ ಸಂಜೆ ನವದೆಹಲಿಗೆ ಪಯಣ ಬೆಳೆಸಿದರು.

ಸೆ.10 ಮತ್ತು 11ರಂದು ವಿವಿಧ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ಮಂಗಳವಾರ ಸಂಜೆ 4ಕ್ಕೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಂಜೆ 5ಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವ ಪ್ರಮುಖರನ್ನು ಭೇಟಿಯಾಗಿ, ಮಾತುಕತೆ ನಡೆಸಲಿದ್ದಾರೆ. ತಮ್ಮ ಎರಡು ದಿನಗಳ ದೆಹಲಿ ಕಾರ್ಯಕ್ರಮದಲ್ಲಿ ಪಾಟೀಲ್ ಸಿಂಗಾಪುರ್ ಹೈಕಮಿಷನರ್, ಜರ್ಮನಿ ರಾಯಭಾರಿ, ಅಮೆರಿಕದ ಯುಎಸ್ ಚೇಂಬರ್ ಆಫ್ ಕಾಮರ್ಸ್, ಇಂಡೋ-ಅಮೆರಿಕ ಬಿಜಿನೆಸ್ ಕೌನ್ಸಿಲ್, ಟಾಯ್ ಜೋನ್ ಮುಂತಾದ ಸಂಘಟನೆಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮಾತನಾಡಲಿದ್ದಾರೆ.

ಆ.11ರಂದು ಸಿಐಐ ಜಾಗತಿಕ ಹೂಡಿಕೆದಾರರ ಸಮಾವೇಶದ ಅಂಗವಾಗಿ ಏರ್ಪಡಿಸಿರುವ ರೋಡ್ ಶೋನಲ್ಲಿ ಸಚಿವರು ಪಾಲ್ಗೊಳ್ಳಲಿದ್ದಾರೆ. ಬಳಿಕ ಭಾರತ್ ಸೆಮಿ ಸಿಸ್ಟಮ್ಸ್ ಏರ್ಪಡಿಸಿರುವ ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳು' ಕುರಿತ ವಿಚಾರ ಸಂಕಿರಣ ಸೇರಿದಂತೆ ಇನ್ನೂ ಅನೇಕ ಚಟುವಟಿಕೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಪರಿಸ್ಥಿತಿ ಎದುರಾದರೆ ಅವರು ಸಿಎಂ ಹುದ್ದೆಯ ರೇಸ್‌ನಲ್ಲಿರುವ ಕಾರಣ ಅವರು ಕಾಂಗ್ರೆಸ್ ಹೈಕಮಾಂಡ್ ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಎಂ.ಬಿ ಪಾಟೀಲ್
ಸಿಂಗಪುರ ಉದ್ಯಮಿಗಳ ಹೂಡಿಕೆಗೆ ಮುಕ್ತ ಸ್ವಾಗತ: ಎಂ.ಬಿ ಪಾಟೀಲ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಂತೆಯೇ ಪಾಟೀಲ್ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಹತ್ತಿರವಾಗಿದ್ದಾರೆ, ಅವರು ಕಷ್ಟದ ಸಮಯದಲ್ಲಿ ಪಕ್ಷಕ್ಕೆ ಸಹಾಯ ಮಾಡಿದ್ದಾರೆ ಎಂದು ಕಾಂಗ್ರೆಸ್ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದು, ದೆಹಲಿಗೆ ತೆರಳಿರುವ ಪಾಟೀಲ್ ಖರ್ಗೆ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಪಾಟೀಲ್ ಅವರ ನವದೆಹಲಿ ಭೇಟಿಯ ಖಾಸಗಿ ಟಿವಿ ಚಾನೆಲ್ ಕ್ಲಿಪ್ ಅನ್ನು ಟ್ಯಾಗ್ ಮಾಡಿದ ಬಿಜೆಪಿ, ಕಾಂಗ್ರೆಸ್ ಅನ್ನು ಲೇವಡಿ ಮಾಡಿದೆ, ಮುಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ಕೆಳಗಿಳಿಸಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ ಎಂದು ಬಿಜೆಪಿ ಹೇಳಿದೆ.

ಪಾಟೀಲ್ ಅವರು ಸಿದ್ದರಾಮಯ್ಯ ಅವರಿಗೂ ಆತ್ಮೀಯರಾಗಿದ್ದು, ಇತ್ತೀಚೆಗೆ ಸಕಲೇಶಪುರದಲ್ಲಿ ನಡೆದ ಎತ್ತಿನಹೊಳೆ ಯೋಜನೆ ಉದ್ಘಾಟನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೊಂದಿಗೆ ಇಬ್ಬರೂ ಒಂದೇ ಕಾರಿನಲ್ಲಿ ತೆರಳಿದ್ದರು. ಕೆಲ ದಿನಗಳ ಹಿಂದೆ ಕಾಂಗ್ರೆಸ್‌ನಲ್ಲಿಯೇ ಪಾಟೀಲ ಅವರ ಪ್ರತಿಸ್ಪರ್ಧಿ ಮತ್ತು ಅವರ ಸಂಪುಟ ಸಹೋದ್ಯೋಗಿ ಶಿವಾನಂದ್ ಪಾಟೀಲ್ ಅವರು ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಕೈಗಾರಿಕಾ ಸಚಿವರಿಗಿಂತ ಬೇರೆ ಯಾರ ಇದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದೇ ವೇಳೆ, ಶಿವಕುಮಾರ್ ಅವರ ಕಿರಿಯ ಸಹೋದರ, ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ ಕೆ ಸುರೇಶ್ ಅವರು ಸೋಮವಾರ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ. ಆದರೆ ಕಾಂಗ್ರೆಸ್‌ನ ನಾಯಕರು ಸಿದ್ದರಾಮಯ್ಯ ಬೆನ್ನಿಗೆ ಚೂರಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com