ಮಂಡ್ಯ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲುತೂರಾಟ; ಪೆಟ್ರೋಲ್ ಬಾಂಬ್ ಎಸೆತ!

ಬದರಿಕೊಪ್ಪಲಿನಲ್ಲಿ ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು.
ಮಂಡ್ಯ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲುತೂರಾಟ; ಪೆಟ್ರೋಲ್ ಬಾಂಬ್ ಎಸೆತ!
Updated on

ಮಂಡ್ಯ: ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ್ದಾರೆ. ಬಳಿಕ ಪೆಟ್ರೋಲ್ ಬಾಂಬ್ ಎಸೆದಿದ್ದು ಸದ್ಯ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಬದರಿಕೊಪ್ಪಲಿನಲ್ಲಿ ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು. ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆಯಿತು. ಬಳಿಕ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.

ಮಂಡ್ಯ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲುತೂರಾಟ; ಪೆಟ್ರೋಲ್ ಬಾಂಬ್ ಎಸೆತ!
ಸಿಜೆಐ ಡಿವೈ ಚಂದ್ರಚೂಡ್ ನಿವಾಸದಲ್ಲಿ ಗಣಪತಿಗೆ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ!

ಮಂಡ್ಯದ ನಾಗಮಂಗಲ ಪಟ್ಟಣ ಸದ್ಯ ಉದ್ವಿಗ್ನಗೊಂಡಿದೆ. ದುಷ್ಕರ್ಮಿಗಳ ಗುಂಪು ಅಂಗಡಿ, ಅಂಗಡಿ ಮುಂದಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಮಧ್ಯೆ ಕತ್ತಿ ಹಿಡಿದು ಝಳಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com