ಬೆಂಗಳೂರು: 100 ಹೊಸ BMTC ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ, ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು, ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ.
100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
Updated on: 

ಬೆಂಗಳೂರು: ಬಿಎಂಟಿಸಿ 100 ಹೊಸ ಬಸ್​ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು.

ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು.

ಬಳಿಕ ಮಾತನಾಡಿ ಅವರು, ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನ‌ ಬಸ್​ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್​ಗಳನ್ನು ಆರಂಭಿಸಲಾಗಿದೆ. ಅಲ್ಲದೆ, ನೂತನವಾಗಿ ಇನ್ನಷ್ಟು ಕ್ಯಾಂಟೀನ್​ಗಳನ್ನು ಆರಂಭಿಸುತ್ತಿದ್ದೇವೆಂದು ಹೇಳಿದರು.

ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ತಿಳಿಸಿದರು.

100 ನೂತನ ಬಿಎಂಟಿಸಿ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ
ತೆರಿಗೆ ಹಂಚಿಕೆಯಲ್ಲಿ ತಾರತಮ್ಯ: ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ!

ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ, ಈ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು, ಈ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಈ ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಆಗಲಿವೆ. ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ನಾನಾ ರೀತಿಯ ಅನುಕೂಲಗಳನ್ನು ಒದಗಿಸಿಕೊಳ್ಳುತ್ತಿರುವ ಬಗ್ಗೆ ಪ್ರತಿದಿನ ಮಾಧ್ಯಮಗಳು ತೋರಿಸುತ್ತಿವೆ. ನಾವು ಬಡವರಿಗೆ ಅಕ್ಕಿ ಕೊಡುವ ಯೋಜನೆಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡದೆ ತೊಂದರೆ ನೀಡಿತು. ಆದರೆ. ನಾವು ಅಕ್ಕಿಯ ಬದಲಿಗೆ, ಅಕ್ಕಿಯ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ.

ರಾಜ್ಯದ ಪ್ರತೀ ಕುಟುಂಬಗಳಿಗೆ ಪ್ರತೀ ತಿಂಗಳಿಗೆ 4-5 ಸಾವಿರ ರೂಪಾಯಿ ಅನುಕೂಲ ಆಗುತ್ತಿದೆ. ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್ ಗಳನ್ನು‌ ಖರೀದಿಸಿ ಸವಲತ್ತು ಒದಗಿಸಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com