ಮಹಿಳೆಯೊಬ್ಬರಿಗೆ CM ಯೋಗ: ಕೋಡಿಶ್ರೀ ಭವಿಷ್ಯದ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಸಿಎಂ ಪೋಸ್ಟ್ ವೈರಲ್, ಸಚಿವೆ ಗರಂ

ಸಿದ್ದರಾಮಯ್ಯನವರು ಅಧಿಕಾರದಿಂದ ಕೆಳಗಿಳಿದರೆ ಮುಂದಿನ ಸಿಎಂ ಬೆಳಗಾವಿಯ ಲಕ್ಷ್ಮೀ ಅಕ್ಕಾ ಎಂದು ಪೋಸ್ಟ್ ಮಾಡುತ್ತಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಳಗಾವಿ: ರಾಜ್ಯದಲ್ಲಿ ಮಹಿಳೆಯೊಬ್ಬರು ಸಿಎಂ ಆಗ್ತಾರೆ' ಎಂಬ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಯವರ ಭವಿಷ್ಯದ ಬೆನ್ನಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು 'ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಮಹಿಳಾ ಸಿಎಂ ಆಗಲಿ' ಎಂಬ ಅಭಿಯಾನ ಆರಂಭಿಸಿದ್ದು, ಈ ಕುರಿತ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕೋಡಿಮಠದ ಶ್ರೀಗಳು ನೀಡಿರುವ ಹೇಳಿಕೆಯನ್ನು ಟ್ಯಾಗ್ ಮಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು, ರಾಜ್ಯಕ್ಕೆ ಮಹಿಳಾ ಸಿಎಂ ನಮ್ಮ ಬೆಳಗಾವಿ ಚೆನ್ನಮ್ಮ, ಕೋಡಿಮಠ ಶ್ರೀಗಳ ಭವಿಷ್ಯ ನಿಜವಾಗುತ್ತೋ?... ಸಿದ್ದರಾಮಯ್ಯನವರು ಅಧಿಕಾರದಿಂದ ಕೆಳಗಿಳಿದರೆ ಮುಂದಿನ ಸಿಎಂ ಬೆಳಗಾವಿಯ ಲಕ್ಷ್ಮೀ ಅಕ್ಕಾ ಎಂದು ಪೋಸ್ಟ್ ಮಾಡುತ್ತಿದ್ದಾರೆ. ಈ ಪೋಸ್ಟ್ ಗಳು ವೈರಲ್ ಆಗುತ್ತಿವೆ.

ಕೋಡಿಮಠ ಅವರು ನುಡಿದಿರುವ ಸ್ಫೋಟಕ ಭವಿಷ್ಯ ರಾಜ್ಯದ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ, ಕಳೆದ ತಿಂಗಳು ಕೋಡಿಮಠ ಶ್ರೀಗಳು ನುಡಿದಿರುವ ಭವಿಷ್ಯವೊಂದು ತೀವ್ರ ವೈರಲ್ ಆಗುತ್ತಿದೆ ಇದೆ.

ಸಂಗ್ರಹ ಚಿತ್ರ
ಸಿಎಂ ಆಗಿ ನಾನೇ ಮುಂದುವರಿತೀನಿ: ಸಿದ್ದರಾಮಯ್ಯ

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಾ ಬಂದಿದ್ದು, ಇದರ ಬೆನ್ನಲ್ಲೆ ಆಗಸ್ಟ್ ತಿಂಗಳಲ್ಲಿ ಮಾತನಾಡಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳು, ರಾಜ್ಯದಲ್ಲಿ ಮುಂದಿನ ಸಿಎಂ ಮಹಿಳೆ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು ಸದ್ಯ ಈ ಭವಿಷ್ಯ ತೀವ್ರ ಸಂಚಲನ ಮೂಡಿಸಿದೆ.

ಈ ನಡುವೆ ಕೋಡಿಶ್ರೀಗಳ ಭವಿಷ್ಯ ಕುರಿತು ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ನಾವೆಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕಿದೆ. ಇದೆಲ್ಲ ಬಾಲಿಷ ಅನಿಸುತ್ತದೆ. ಈ ವಿಚಾರವಾಗಿ ನಾನು ಏನೂ ಮಾತನಾಡಲು ಬಯಸಲ್ಲ ಎಂದು ಹೇಳಿದ್ದಾರೆ.

ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತೇನೆ. ಪಕ್ಷದಲ್ಲಿ ಹೈಕಮಾಂಡ್, ಶಾಸಕಾಂಗ ಅಂತ ಇದೆ. ಆದರೆ ಇಂತಹ ವಿಚಾರವನ್ನು ಅಲ್ಲಿ, ಇಲ್ಲಿ ಗಲ್ಲಿಯಲ್ಲಿ ಮಾತನಾಡುವ ವಿಚಾರ ಅಲ್ಲ. ಧೀಮಂತ ನಾಯಕತ್ವ ನಮ್ಮ ಪಕ್ಷಕ್ಕೆ ಇದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಗಟ್ಟಿಯಾಗಿ ಇರುತ್ತಾರೆ. ಸಿದ್ದರಾಮಯ್ಯ ಎಲ್ಲಿಯವರೆಗೆ ಗಟ್ಟಿಯಾಗಿ ಇರುತ್ತಾರೆ ಅಲ್ಲಿಯವರೆಗೆ ಅವರೇ ಸಿಎಂ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com