ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಹಗರಣಗಳ ತನಿಖೆ ತ್ವರಿತಗತಿಯಲ್ಲಿ ವಿಲೇವಾರಿ: ಡಾ. ಜಿ.ಪರಮೇಶ್ವರ್

ತ್ವರಿತಗತಿಯಲ್ಲಿ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿಯವರು ಸಮಿತಿ ರಚಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಹಗರಣಗಳ ತನಿಖೆಯನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದ್ದು, ಒಂದು ವಾರದ ಒಳಗೆ ಸಮಿತಿ ಸಭೆ ನಡೆಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಹಗರಣ ಪ್ರಕರಣಗಳನ್ನು ಗುರುತಿಸಿದ್ದೇವೆ.‌ ಅವುಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲಿಸಿ, ಸಚಿವ ಸಂಪುಟಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಹೇಳಿದರು.

ತ್ವರಿತಗತಿಯಲ್ಲಿ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿಯವರು ಸಮಿತಿ ರಚಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರ ಸಚಿವ ಸಂಪುಟ ಸಭೆಯ ಗಮನಕ್ಕೆ ಬಂದ ಬಳಿಕ ತ್ವರಿತಗತಿಯಲ್ಲಿ ಮಾಡಲು ಮುಖ್ಯಮಂತ್ರಿ ಸಮಿತಿ ರಚಿಸಿದ್ದಾರೆಂದು ತಿಳಿಸಿದರು.

ಸಂಗ್ರಹ ಚಿತ್ರ
'ಮುಡಾ' ಅಸ್ತ್ರಕ್ಕೆ ಪ್ರತ್ಯಸ್ತ್ರ ಸಿದ್ದ: BJP ಅವಧಿಯ ಅಕ್ರಮ ಆರೋಪಗಳ ತನಿಖೆ ಚುರುಕು; ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚನೆ

ಬಿಜೆಪಿಯವರು ಏನಾದರು ಹೇಳಿಕೊಳ್ಳಲಿ. ನಮ್ಮನ್ನು ಟೀಕೆ ಮಾಡುವುದಕ್ಕೆ,‌ ಸಲಹೆ‌ ನೀಡಲು, ತಪ್ಪು ಮಾಡಿದಾಗ ಹೇಳುವುದಕ್ಕೆ ಅವರಿಗೆ ಜವಾಬ್ಧಾರಿಗಳಿರುತ್ತವೆ. ಆಡಳಿತ ನಡೆಸುವರಿಗೂ ಅವರಿಗೆ ಆದಂತಹ ಜವಾಬ್ದಾರಿಗಳಿರುತ್ತವೆ' ಎಂದರು.

ಸಿಎಂ ಸ್ಥಾನ ಚರ್ಚೆ ವಿಚಾರ ಕುರಿತು ಮಾತನಾಡಿ, ಮುಖ್ಯಮಂತ್ರಿ ಸ್ಥಾನದ ಚರ್ಚೆಯ ಬಗ್ಗೆ ಶಿಸ್ತಿನ ಕ್ರಮದ ಕುರಿತು ಪಕ್ಷದ ಅಧ್ಯಕ್ಷರು ಕಡಿವಾಣ ಹಾಕುತ್ತಾರೆ. ಅಧ್ಯಕ್ಷರು ಅಮೇರಿಕ ಪ್ರವಾಸದಲ್ಲಿದ್ದು, ಬಂದನಂತರ ಈ ಬಗ್ಗೆ ಗಮನ ಹರಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.

ವಾಲ್ಮೀಕಿ ನಿಗಮ ಹಗರಣದ ಇ.ಡಿ. ಚಾರ್ಜ್‌ಶೀಟ್ ಕುರಿತು ಪ್ರತಿಕ್ರಿಯಿಸಿ, ಇಡಿ ಆರೋಪಪಟ್ಟಿಯಲ್ಲಿ, ಸಾಕ್ಷಿಗಳು ಮತ್ತು ಪುರಾವೆಗಳ ಆಧಾರದ ಮೇಲೆ ತನಿಖಾ ಸಂಸ್ಥೆ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com