ಮುಡಾ ಹಗರಣ: ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಅರ್ಜಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಇಂದು ಸಹ ಸುಧೀರ್ಘ ವಾದ, ಪ್ರತಿವಾದ ನಡೆಯಿತು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್​ ಅರ್ಜಿಯ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿದ ಹೈಕೋರ್ಟ್, ತೀರ್ಪ ಕಾಯ್ದಿರಿಸಿದೆ.

ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ತೀರ್ಪು ಕಾಯ್ದಿರಿಸಲಾಗಿದೆ ಮತ್ತು ಮಧ್ಯಂತರ ಆದೇಶ ಮುಂದುವರಿಯುತ್ತದೆ ಎಂದು ಹೇಳಿದೆ.

ಈಗಾಗಲೇ ರಾಜ್ಯಪಾಲರ ಪರವಾಗಿ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ, ರಾಜ್ಯ ಸರ್ಕಾರದ ಪರವಾಗಿ ಶಶಿಕಿರಣ್​ ಶೆಟ್ಟಿ ವಾದ ಮಂಡಿಸಿದ್ದಾರೆ. ಇಂದು ಮುಖ್ಯಮಂತ್ರಿಗಳ ಪರ ಹಿರಿಯ ವಕೀಲರಾದ ಅಭಿಷೇಕ್​ ಮನು ಸಿಂಘ್ವಿ ಅವರು ವಾದ ಮಂಡಿಸಿದರು.

ಸಿಎಂ ಸಿದ್ದರಾಮಯ್ಯ
ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಅರ್ಜಿ: ವಿಚಾರಣೆ ಸೆಪ್ಟೆಂಬರ್ 12ಕ್ಕೆ ಮುಂದೂಡಿದ ಹೈಕೋರ್ಟ್

ರಾಜ್ಯಪಾಲರು 23 ವರ್ಷದ ಹಳೆಯ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದಾರೆ. ಇದು ರಾಷ್ಟ್ರಪತಿ ಆಳ್ವಿಕೆಗಿಂತ ಹೆಚ್ಚು ರಾಜಕೀಯಪ್ರೇರಿತ. ಸೆಕ್ಷೆನ್ 17ಎ ಅಡಿ ಅನುಮತಿ ನೀಡುವಾಗ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಪಾಲಿಸದಿದ್ದರೆ ಅದಕ್ಕೆ ಸೂಕ್ತ ಕಾರಣ ನೀಡುವ ಹೊಣೆ ರಾಜ್ಯಪಾಲರ ಮೇಲಿದೆ. ಎಲ್ಲಾ ಪ್ರಕರಣಗಳಲ್ಲೂ ಸಚಿವ ಸಂಪುಟ ಸಿಎಂ ಪರ ಇದೆ, ತಾರತಮ್ಯ ಮಾಡಿದೆ ಎನ್ನಲಾಗದು. ಸಚಿವ ಸಂಪುಟದ ಸಭೆಯಲ್ಲಿ ಮಂತ್ರಿಗಳು ಬೇರೆ ಬೇರೆ ಅಭಿಪ್ರಾಯ ಮಂಡಿಸಬಹುದು ಎಂದು ಅಭಿಷೇಕ್​ ಮನು ಸಿಂಘ್ವಿ ವಾದಿಸಿದರು.

ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸು ಪಾಲಿಸಲೇಬೇಕೆಂದಿಲ್ಲ. ಆದರೆ ಭಿನ್ನ ನಿಲುವಿಗೆ ಕಾರಣ ನೀಡಬೇಕೆಂಬುದು ನಿಮ್ಮ ವಾದವೇ? ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಂಘ್ವಿ, ಸಚಿವ ಸಂಪುಟದ ಶಿಫಾರಸನ್ನು ಸಾರಾಸಗಟಾಗಿ ತಳ್ಳಿಹಾಕುವಂತಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ಶಿಫಾರಸ್ಸು ತಪ್ಪೇಂದು ಹೇಳಿಲ್ಲ. ಹೀಗಾಗಿ ಕಾರಣವೇ ಹೇಳದೆ ಸಚಿವ ಸಂಪುಟದ ಕ್ರಮ ತಾರತಮ್ಯಪೂರಿತವೆನ್ನಲಾಗದು ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು.

ಸುಧೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರು ತೀರ್ಪು ಕಾಯ್ದಿರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com