ನಾಗಮಂಗಲ ಗಣೇಶ ಮೆರವಣಿಗೆ ಗಲಭೆ ಪ್ರಕರಣ​: 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 150 ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. 30 ಮುಸ್ಲಿಂ ಯುವಕರು ಮತ್ತು 23 ಹಿಂದೂ ಯುವಕರನ್ನು ಬಂಧಿಸಲಾಗಿದ್ದು ಇನ್ನೂ ತಲೆಮರೆಸಿಕೊಂಡಿರುವ 97 ಜನರಿಗೆ ಶೋಧ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಂಡ್ಯ: ಗಣಪತಿ ಮೆರವಣಿಗೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನಾಗಮಂಗಲ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳನ್ನು ಪೊಲೀಸರು ಇಂದು ಕೋರ್ಟ್​ಗೆ ಹಾಜರುಪಡಿಸಿದ್ದರು. ಸದ್ಯ ಆರೋಪಿಗಳನ್ನು ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ.

ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 150 ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. 30 ಮುಸ್ಲಿಂ ಯುವಕರು ಮತ್ತು 23 ಹಿಂದೂ ಯುವಕರನ್ನು ಬಂಧಿಸಲಾಗಿದ್ದು ಇನ್ನೂ ತಲೆಮರೆಸಿಕೊಂಡಿರುವ 97 ಜನರಿಗೆ ಶೋಧ ನಡೆಸಿದ್ದಾರೆ.

ನಾಗಮಂಗಲದಲ್ಲಿ ದಕ್ಷಿಣ ವಲಯ ಐಜಿಪಿ ನೇತೃತ್ವದಲ್ಲಿ ಪಥಸಂಚಲನ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆಗೆ ಬೋರಲಿಂಗಯ್ಯ ನೇತೃತ್ವದಲ್ಲಿ ರೌಂಡ್ಸ್ ಹಾಕಿದ್ದು, ಚನ್ನಕೇಶವ ದೇವಾಲಯ, ಪಾಂಡವಪುರ-ಬೆಳ್ಳೂರು ರಸ್ತೆ, ಮಂಡ್ಯ ವೃತ್ತ ಸೇರಿ ಹಲವು ಬಡಾವಣೆಗಳಲ್ಲಿ ಪಥಸಂಚಲನ ಮಾಡಲಾಗಿದೆ. ನಾಗಮಂಗಲ ಸಹಜ ಸ್ಥಿತಿಗೆ ತರಲು ಪೊಲೀಸರು ಪಥಸಂಚಲನ ಮಾಡಿದ್ದಾರೆ.

ಸಂಗ್ರಹ ಚಿತ್ರ
ನಾಗಮಂಗಲ ಗಲಭೆ: ತನಿಖೆಗೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಒತ್ತಾಯ

ಜಿಲ್ಲಾ ಪೊಲೀಸ್ ಅಧೀಕ್ಷಕರು, ಐಜಿಪಿ, ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ. ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗದು. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮನವಿ ಮಾಡಿದರು. ನಾಗಮಂಗಲ ಘಟನೆ ಸಂಬಂಧ ಸುಮಾರು 52 ಜನರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ವೇಳೆ ಒಬ್ಬ ಎಎಸ್​ಐಗೂ ಗಾಯವಾಗಿದೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ವಿನಂತಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com