Nagamangala: ''ನಮ್ಮ ಮಕ್ಕಳು ಅಮಾಯಕರು, ಬಿಟ್ಟು ಬಿಡಿ''; ಪೊಲೀಸ್ ಠಾಣೆ ಮುಂದೆ ಮಹಿಳೆಯರ ಹೈಡ್ರಾಮಾ!

ಸಚಿವ ಚೆಲುವರಾಯಸ್ವಾಮಿ ಮಹಿಳೆಯರೊಂದಿಗೆ ಮಾತನಾಡಿದ್ದು, ಈ ವೇಳೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಸೂಚಿಸಲಾಗಿದೆ. ಬಂಧಿತ ಅಮಾಯಕರನ್ನು ಬಿಟ್ಟುಬಿಡುವಂತೆ ಹೇಳಿದ್ದೇವೆ ಎಂದರು.
Nagamangala Police Station
ನಾಗಮಂಗಲ ಪೊಲೀಸ್ ಠಾಣೆ
Updated on

ಮಂಡ್ಯ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವವರನ್ನು ಬಿಟ್ಟುಬಿಡುವಂತೆ ಪೊಲೀಸ್ ಠಾಣೆ ಮುಂದೆ ಸಂಬಂಧಿಕರು ಹೈಡ್ರಾಮಾ ನಡೆಸಿರುವ ಘಟನೆ ಗುರುವಾರ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದವರ ಕುಟುಂಬಸ್ಥರು ನಾಗಮಂಗಲ ಠಾಣೆಯ ಮುಂದೆ ಹೈಡ್ರಾಮಾ ಮಾಡಿದ್ದು, ಪೊಲೀಸರು ಮನೆಯಲ್ಲಿದ್ದವರನ್ನು ಬಂಧಿಸಿದ್ದಾರೆ. ಕೂಡಲೇ ಅವರನ್ನು ಬಿಟ್ಟುಬಿಡುವಂತೆ ಬಂಧಿತರ ಸಂಬಂಧಿತ ಮಹಿಳೆಯರು ಆಗ್ರಹಿಸಿದ್ದಾರೆ.

ನಾಗಮಂಗಲ ನಗರ ಪೊಲೀಸ್ ಠಾಣೆ ಎದುರು ನೂರಾರು ಮಂದಿ ಮಹಿಳೆಯರು ತಮ್ಮ ಮಕ್ಕಳನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಮಕ್ಕಳನ್ನು ತೋರಿಸಿ, ಅವರನ್ನು ಬಿಡುಗಡೆ ಮಾಡಿ ಎಂದು ಪಟ್ಟು ಹಿಡಿದಿದ್ದು, ಈ ವೇಳೆ ಪೊಲೀಸರು ಹಾಗೂ ಮಹಿಳೆಯರ ನಡುವೆ ವಾಗ್ವಾದ ಕೂಡ ನಡೆದಿದೆ. ಮಹಿಳೆಯರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

Nagamangala Police Station
ನಾಗಮಂಗಲ ಈಗ ಬೂದಿ ಮುಚ್ಚಿದ ಕೆಂಡ: 46 ಮಂದಿ ಬಂಧನ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸರ್ಕಾರ

ಮಹಿಳೆಯರಿಂದ ಧರಣಿ

ಪೊಲೀಸ್ ಠಾಣೆ ಎದುರು ಮಹಿಳೆಯರಿಂದ ದಿಢೀರ್ ಪ್ರತಿಭಟನೆ ನಡೆದಿದ್ದು, ಠಾಣೆಯ ಎದುರಿನ ರಸ್ತೆಯಲ್ಲಿ ಧರಣಿ ಕುಳಿತಿದ್ದಾರೆ. ಬಳಿಕ ಮಹಿಳೆಯರೊಂದಿಗೆ ಮಾತನಾಡಿದ ಎನ್ ಸ್ಪೆಕ್ಟರ್ ನಿರಂಜನ್ ಅವರು, 'ವಿಚಾರಣೆ ಮಾಡಲು ಕರೆತಂದಿದ್ದೇವೆ. ಯಾರು ತಪ್ಪು ಮಾಡಿಲ್ಲ ಅವರನ್ನು ಬಿಟ್ಟು ಕಳುಹಿಸುತ್ತೇವೆ. 144 ಸೆಕ್ಷನ್ ಜಾರಿಯಾಗಿದ್ದು, ಗುಂಪುಗೂಡದೆ ಮನೆಗೆ ತೆರಳಿ ಎಂದು ಮಹಿಳೆಯರನ್ನು ಕಳಿಸಿದ್ದಾರೆ.

ಸಚಿವ ಚೆಲುವರಾಯಸ್ವಾಮಿ

ಇದೇ ವೇಳೆ ಠಾಣೆ ಬಳಿ ಆಗಮಿಸಿದ ಸಚಿವ ಚೆಲುವರಾಯಸ್ವಾಮಿ ಮಹಿಳೆಯರೊಂದಿಗೆ ಮಾತನಾಡಿದ್ದು, ಈ ವೇಳೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಸೂಚಿಸಲಾಗಿದೆ. ಅಂತೆಯೇ ಬಂಧಿತ ಅಮಾಯಕರನ್ನು ಬಿಟ್ಟುಬಿಡುವಂತೆ ಹೇಳಿದ್ದೇವೆ ಎಂದರು.

ಪ್ರಕರಣ ಸಂಬಂಧ 46 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬುಧವಾರ ರಾತ್ರಿಯಿಂದ ಸೆ.14ರ ವರೆಗೆ ನಾಗಮಂಗಲದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇಂದು ಪಟ್ಟಣದ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com