ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್ ಗುರುವಾರ ಮತ್ತೆ ಒಂದು ದಿನ ವಿಸ್ತರಿಸಿ ಆದೇಶ ಹೊರಡಿಸಿದೆ.
ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.13ರ ವರೆಗೆ ವಿಸ್ತರಿಸಿದೆ.
ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಕೋರ್ಟ್ ಎಲ್ಲಾ ಆರೋಪಿಗಳಿಗೆ ಮತ್ತೆ 1 ದಿನ ನ್ಯಾಯಾಂಗ ಬಂಧನ ವಿಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಕೇಸ್ ನಲ್ಲಿ ನಟ ದರ್ಶನ್ ಭಾಗಿಯಾಗಿರುವುದು ದೃಢವಾಗಿದೆ.
Advertisement