ನಾಗಮಂಗಲ ಗಲಭೆ: ತನಿಖೆಗೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಒತ್ತಾಯ

ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹಿಂದೂ ವಿರೋಧಿ ಪಿತೂರಿಯಲ್ಲಿ ತೊಡಗಿದ್ದಾರೆ. ನಿನ್ನೆ ದಿನ ನಾಗಮಂಗಲದಲ್ಲಿ ನಡೆದಿರುವ ಘಟನೆಯಲ್ಲಿ ಹಿಂದೂಗಳು, ನಮ್ಮ ಗಣಪನನ್ನು ಅವಮಾನಿಸಲಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Updated on

ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ನಡೆದಿರುವ ಕೋಮು ಗಲಭೆಯ ತನಿಖೆಗೆ ಗುರುವಾರ ಒತ್ತಾಯಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹಿಂದೂ ವಿರೋಧಿ ಪಿತೂರಿಯಲ್ಲಿ ತೊಡಗಿದ್ದಾರೆ. ನಿನ್ನೆ ದಿನ ನಾಗಮಂಗಲದಲ್ಲಿ ನಡೆದಿರುವ ಘಟನೆಯಲ್ಲಿ ಹಿಂದೂಗಳು, ನಮ್ಮ ಗಣಪನನ್ನು ಅವಮಾನಿಸಲಾಗಿದೆ. ಕಲ್ಲು ತೂರಾಟ ನಡೆಸಿದ್ದು, ಚಪ್ಪಲಿ ಎಸೆಯಲಾಗಿದೆ ಎಂದು ಆರೋಪಿಸಿದರು.

ಅಂಗಡಿಗಳಿಗೆ ಬೆಂಕಿ ಹಚ್ಚಿದ್ದರೂ ರಾಜ್ಯ ಸರ್ಕಾರ ಸಣ್ಣ ಘಟನೆ ಎಂದು ಹೇಳುತ್ತಿದೆ. ಕೋಮು ಗಲಭೆ ಕುರಿತು ಕೂಡಲೇ ತನಿಖೆ ನಡೆಯಬೇಕು, NIA ಕೂಡಾ ತನಿಖೆಯಲ್ಲಿ ತೊಡಗಿಸಿಕೊಳ್ಳಬೇಕು, ಆಗ ಮಾತ್ರ ಸತ್ಯ ಹೊರಬರಲು ಸಾಧ್ಯ ಎಂದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ನಾಗಮಂಗಲ ಈಗ ಬೂದಿ ಮುಚ್ಚಿದ ಕೆಂಡ: 46 ಮಂದಿ ಬಂಧನ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸರ್ಕಾರ

ಬುಧವಾರ ಬದರಿಕೊಪ್ಪಲಿನಲ್ಲಿ ಅದ್ದೂರಿಯಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಲಾಗುತ್ತಿತ್ತು. ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದರು. ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿದ್ದು, ದುಷ್ಕರ್ಮಿಗಳ ಗುಂಪು ಅಂಗಡಿ, ಅಂಗಡಿ ಮುಂದಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಅಷ್ಟೇ ಅಲ್ಲದೆ ರಸ್ತೆ ಮಧ್ಯೆ ಕತ್ತಿ ಹಿಡಿದು ಝಳಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com