ಬೆಂಗಳೂರು: ಹಿಂಸಾಚಾರ ಪೀಡಿತ ನಾಗಮಂಗಲ ಪಟ್ಟಣದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.
ಪ್ರತಿಪಕ್ಷಗಳು ಈ ಪ್ರಕರಣವನ್ನು "ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ" ಎಂದು ವಾಗ್ದಾಳಿ ನಡೆಸಿದ ಪರಮೇಶ್ವರ, ಘಟನೆಯಿಂದಾಗಿ ಜೀವನೋಪಾಯಕ್ಕೆ ತೊಂದರೆಯಾದವರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಯೋಚಿಸುತ್ತಿದೆ ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ನಿಮಜ್ಜನ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಬುಧವಾರ ರಾತ್ರಿ ಹಲವು ಅಂಗಡಿಗಳು ಮತ್ತು ವಾಹನಗಳನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.
ಘಟನೆ ಸಂಬಂಧ ಪೊಲೀಸ್ ಇನ್ಸ್‌ಪೆಕ್ಟರ್ ರನ್ನು ಅಮಾನತುಗೊಳಿಸಲಾಗಿದೆ. ನಾವು ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಘಟನೆಗಳು ನಡೆದರೆ ಅದಕ್ಕೆ ಅವರೇ ಹೊಣೆ ಎಂದು ನಾವು ಹೇಳಿದ್ದೆವು. ಇನ್ಸ್‌ಪೆಕ್ಟರ್ ನಿರ್ಲಕ್ಷ್ಯ ತೋರಿದ ಕಾರಣ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪರಮೇಶ್ವರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದೆ. ‘ವಾಸ್ತವಾಂಶ’ಗಳ ಕುರಿತು ವರದಿ ಸಲ್ಲಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಐಜಿ(ಪೋಲೀಸ್ ಇನ್ಸ್ಪೆಕ್ಟರ್ ಜನರಲ್) ಮತ್ತು ಇತರ ಹಿರಿಯ ಅಧಿಕಾರಿಗಳು ಅಲ್ಲಿ ಮೊಕ್ಕಾಂ ಹೂಡಿದ್ದಾರೆ ಮತ್ತು ಮುಂದೆ ಏನೂ ಆಗದಂತೆ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈಗ ಪರಿಸ್ಥಿತಿ ಶಾಂತಿಯುತವಾಗಿದ್ದು, ಶಾಂತಿ ಸಭೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಹಿಂಸಾಚಾರ ಪೂರ್ವ ಯೋಜಿತವೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ತನಿಖೆಗೆ ಆದೇಶಿಸಲಾಗಿದೆ ಮತ್ತು ವರದಿ ಬಂದ ನಂತರ ವಿಷಯ ತಿಳಿಯಲಿದೆ".... ಕಾನೂನನ್ನು ಕೈಗೆ ತೆಗೆದುಕೊಳ್ಳಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಗಣೇಶ ಹಬ್ಬವಾಗಲಿ ಅಥವಾ ಇನ್ನಾವುದೇ ಹಬ್ಬವಾಗಲಿ ಯಾರಾದರೂ ಅನಗತ್ಯ ಗೊಂದಲ ಅಥವಾ ಅಶಾಂತಿ ಸೃಷ್ಟಿಸಿದರೆ ಅವರನ್ನು ಬಿಡುವುದಿಲ್ಲ ಮತ್ತು ಕಾನೂನು ಪ್ರಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.
ಇಂತಹ ಘಟನೆಗೆ ಓಲೈಕೆ ರಾಜಕಾರಣ ಕಾರಣ ಎಂಬ ಆರೋಪವನ್ನು ತಳ್ಳಿಹಾಕಿದ ಗೃಹ ಸಚಿವರು, "ನಮಗೆ ಅದರ ಅಗತ್ಯವಿಲ್ಲ." ಎಂದರು ಮತ್ತು ಘಟನೆ "ಆಕಸ್ಮಿಕ" ಎಂಬ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ನಿಮ್ಮ ಸ್ವಂತ ಲಾಭಕ್ಕಾಗಿ ಬಳಸಿದರೆ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ನಮಗೆ ಜವಾಬ್ದಾರಿ ಇದೆ. ನಾನು ರಾಜ್ಯದ ಗೃಹ ಸಚಿವರಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿರುವ. ನನಗೆ ಅವರ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
Advertisement