ಬೆಂಗಳೂರು: ನಾಗಮಂಗಲ ಕೋಮು ಗಲಭೆ ಖಂಡಿಸಿ ಪ್ರತಿಭಟನೆ; ಹಿಂದೂ ಕಾರ್ಯಕರ್ತರು ವಶಕ್ಕೆ

ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ನಗರದ ವತಿಯಿಂದ ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು.
 ಟೌನ್ ಹಾಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಟೌನ್ ಹಾಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
Updated on

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ಇಲ್ಲಿನ ಟೌನ್ ಹಾಲ್ ಎದುರು ಪ್ರತಿಭಟನೆ ನಡೆಸಲು ಯತ್ನಿಸಿದ ಸುಮಾರು 40 ಮಂದಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ನಗರದ ವತಿಯಿಂದ ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಈ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು, ಅಲ್ಲದೆ, ಸ್ಥಳದಲ್ಲಿ ಡಿಸಿಪಿ ಶೇಖರ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಸೆ.11ರಂದು ನಾಗಮಂಗಲ ಪಟ್ಟಣದಲ್ಲಿ ಅಂಗಡಿ, ವಾಹನಗಳ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೆಲವರು ಗಣೇಶ ಮೂರ್ತಿಗಳನ್ನು ಹಿಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ, ತಪ್ಪಿಲ್ಲದಿದ್ದರೂ ಬಂಧನಕ್ಕೊಳಪಡಿಸಿರುವ ಹಿಂದುಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಹಲವರನ್ನು ವಶಕ್ಕೆ ಪಡೆದರು.

"ಜನರ ಗುಂಪು ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಲು ಮುಂದಾದರು. ಆದರೆ ಅವರು ಸ್ಥಳಕ್ಕೆ ತಲುಪುವ ಮೊದಲೇ, ಅಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಇಲ್ಲದ ಕಾರಣ ನಾವು ಅವರನ್ನು ತಡೆದಿದ್ದೇವೆ, ಆದರೆ ನಮ್ಮ ಮಾತು ಕೇಳದ ಕಾರಣ ಅವರನ್ನು ವಶಕ್ಕೆ ತೆಗೆದುಕೊಳ್ಳಬೇಕಾಯಿತು. ಅವರಲ್ಲಿ ಸುಮಾರು 40 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ಟೌನ್ ಹಾಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
Nagamangala: ''ನಮ್ಮ ಮಕ್ಕಳು ಅಮಾಯಕರು, ಬಿಟ್ಟು ಬಿಡಿ''; ಪೊಲೀಸ್ ಠಾಣೆ ಮುಂದೆ ಮಹಿಳೆಯರ ಹೈಡ್ರಾಮಾ!

ಈ ನಡುವೆ ಪ್ರತಿಭಟನೆ ನೋಡಲು ಬಂದಿದ್ದ ವಿಶ್ವ ಹಿಂದೂ ಪರಿಷತ್ ಸದಸ್ಯ ರತ್ನಾಕರ್ ಭಟ್ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ನಾನು ವಿಶ್ವ ಹಿಂದೂ ಪರಿಷತ್ ಸದಸ್ಯ, ವೃತ್ತಿಯಲ್ಲಿ ನಾನು ವಕೀಲನಾಗಿದ್ದೇನೆ. ನಾನು ಕೇಸರಿ ಶಾಲು ಹಾಕಿದ್ದೇನೆ ಎಂಬ ಕಾರಣಕ್ಕೆ ನನ್ನನ್ನು ಬಂಧಿಸಿದ್ದಾರೆ. ಕೇಸರಿ ಶಾಲು ಹಾಕುವುದೇ ತಪ್ಪಾ? ಟೌನ್ ಹಾಲ್ ನಲ್ಲಿ ಬೆಂಗಳೂರು ಗಣೇಶ ಉತ್ಸವ ಸಮಿತಿ‌ ಕಡೆಯಿಂದ ಸಭೆ ಇತ್ತು, ಹೀಗಾಗಿ ಸಭೆ ನೋಡಲು ನಾನು ಬಂದಿದ್ದೆ, ಪ್ರತಿಭಟನೆ ಮಾಡಲು ಬಂದಿರಲಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com