ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ವೈರಲ್ ಆಗಿದೆ.
ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ ಮುಸ್ಲಿಂ ಯುವಕರ ಪ್ಯಾಲಿಸ್ತೀನ್ ಧ್ವಜ ಹಿಡಿದು ಓಡಾಡಿದ್ದು ಇದರ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಅಲ್ಲದೆ ಮುಸ್ಲಿಂ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ನಗರ ಠಾಣೆ ಮುಂಭಾಗ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ಯಾಲಿಸ್ತೀನ್ ಧ್ವಜ ಹಾರಿಸಿದ ದೇಶದ್ರೋಹಿಗಳನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಹಿಂದೂ ಕಾರ್ಯಕರ್ತರು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಿಸುತ್ತಿರುವುದು ಇದೇ ಮೊದಲಲ್ಲ. ಆಗಾಗ ಇಂತಹ ಪುಂಡಾಟ ನಡೆಯುತ್ತಲೇ ಇರುತ್ತವೆ.
Advertisement