ರಾಜ್ಯ
ಗಣೇಶ ವಿಸರ್ಜನೆ ವೇಳೆ ದುರಂತ: ತಂದೆ-ಮಗ ಸೇರಿ ಮೂವರು ಗಣೇಶ ಮೂರ್ತಿ ಜೊತೆ ಜಲಸಮಾಧಿ!
ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಮೃತದೇಹಗಳಿಗೆ ಶೋಧ ನಡೆಸಿದ್ದಾರೆ.
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಸಾವನ್ನಪ್ಪಿರುವಂತಹ ದುರ್ಘಟನೆ ಸಂಭವಿಸಿದೆ.
ಮೃತರನ್ನು ತಂದೆ ಮಗ, 46 ವರ್ಷದ ರೇವಣ್ಣ, 26 ವರ್ಷದ ಶರತ್ ಹಾಗೂ ದಯಾನಂದ ಎಂದು ಗುರುತಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಮೃತದೇಹಗಳಿಗೆ ಶೋಧ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ