ನಾಳೆ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲದ ಬಗ್ಗೆ ಚರ್ಚೆ - ಸಿಎಂ

ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಭಾಗದ ಎಲ್ಲಾ ನಿರೀಕ್ಷೆಗಳನ್ನ ಒಮ್ಮೆಲೆ ಮಾಡುವುದಕ್ಕೆ ಆಗುವುದಿಲ್ಲ. ನಾಳೆ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುತ್ತೇವೆ ಎಂದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಭಾಗದ ಎಲ್ಲಾ ನಿರೀಕ್ಷೆಗಳನ್ನ ಒಮ್ಮೆಲೆ ಮಾಡುವುದಕ್ಕೆ ಆಗುವುದಿಲ್ಲ. ನಾಳೆ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುತ್ತೇವೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಪರವಾಗಿದೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ
ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕನ ಬಾಯಿ ಶುದ್ಧ ಮಾಡಿ: BJP ಗೆ ಸಿಎಂ ಸಿದ್ದರಾಮಯ್ಯ

ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ನಮ್ಮ ಸರ್ಕಾರವೇ ಪ್ರಯತ್ನಿಸಿದ್ದು, ಹೊರತು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿತ್ತು ಎಂದರು.

ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಹೇಳಿದರು.

ಇನ್ನು ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣ ಬಗ್ಗೆ ಮಾತನಾಡಿದ ಸಿಎಂ, ನಾಗಮಂಗಲ ಶಾಂತವಾಗಿದೆ. ಯಾವುದೇ ಊಹಾಪೋಹ ಬೇಡ. ನಿರ್ಲಕ್ಷ್ಯ ವಹಿಸಿದ್ದ ಓರ್ವ ಇನ್ಸ್​ಪೆಕ್ಟರ್​ ಅಮಾನತು ಮಾಡಿದ್ದೇವೆ. ಓರ್ವ ಡಿವೈಎಸ್​ಪಿ ವರ್ಗಾವಣೆ ಮಾಡಿದ್ದೇವೆ. ರಾಜ್ಯದಲ್ಲಿ ಎಲ್ಲೂ ಹೊತ್ತಿ ಉರಿಯುತ್ತಿಲ್ಲ. ಎಲ್ಲೆಡೆ ಶಾಂತವಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟು, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com