ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಬಾವುಟ ಹಿಡಿದು ಬೈಕ್​ನಲ್ಲಿ ಓಡಾಟ, ನಾಲ್ವರು ಅಪ್ರಾಪ್ತರ ಬಂಧನ

ನಾಗಮಂಗಲ ಗಲಭೆ ಬೆನ್ನಲ್ಲೇ ನಡೆದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಪ್ರಾಪ್ತರು
ಅಪ್ರಾಪ್ತರು
Updated on

ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಬಾವುಟ ಹಿಡಿದು ಬೈಕ್ ನಲ್ಲಿ ನಗರದಲ್ಲಿ ಓಡಾಡಿರುವ ನಾಲ್ವರು ಅಪ್ರಾಪ್ತರನ್ನು ವಶಕ್ಕೆ ಪಡೆದಿರುವುದನ್ನು ಪೊಲೀಸ್ ಮೂಲಗಳು ಖಚಿತಪಡಿಸಿವೆ. ಬಂಧಿತ ಅಪ್ರಾಪ್ತರನ್ನು ಘಟನೆ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ.

ಬಾಲಕರಿಗೆ ಪ್ಯಾಲೆಸ್ಟೈನ್ ಧ್ವಜ ಸಿಕ್ಕಿದ್ದು ಹೇಗೆ? ಧ್ವಜ‌ ನೀಡಿ ನಗರದಾದ್ಯಂತ ಓಡಾಟ ನಡೆಸಲು ಸೂಚನೆ ನೀಡಲಾಗಿತ್ತಾ? ಇಲ್ಲವೇ ತಾವೇ ಸ್ವತ: ಹೀಗೆ ಮಾಡಿದ್ರಾ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯ ವಿಚಾರಣೆ ನಡೆಸಲು ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.

ಪ್ಯಾಲೆಸ್ಟೈನ್ ಧ್ವಜ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈದ್ ಮಿಲಾದ್ ಮೆರವಣಿಗೆ ಸಾಗಲಿರುವ ನಗರದ ಪ್ರಮುಖ ರಸ್ತೆಗಳಲ್ಲಿ ತೀವ್ರ ನಿಗಾ ವಹಿಸಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ಬೈಕ್ ನಲ್ಲಿ ಅಪ್ರಾಪ್ತರು ಪ್ಯಾಲೆಸ್ಟೈನ್ ಬಾವುಟ ಹಿಡಿದು ಓಡಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾಗಮಂಗಲ ಗಲಭೆ ಬೆನ್ನಲ್ಲೇ ನಡೆದಿರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಪ್ರಾಪ್ತರು
ಚಿಕ್ಕಮಗಳೂರು: ಪ್ಯಾಲೆಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ; ವಿಡಿಯೋ ವೈರಲ್!

ಈ ಘಟನೆಯನ್ನು ಖಂಡಿಸಿರುವ ವಿಪಕ್ಷ ನಾಯಕ ಆರ್.ಅಶೋಕ್, ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಶಾಂತಿಗೆ ಭಂಗ ತರಲು ಶಂಕಿತ ಸಂಘಟನೆಗಳು ಪ್ರಯತ್ನಿಸುತ್ತಿವೆ. ಇಂತಹ ಕೆಲಸಕ್ಕೆ ಕುಮ್ಮಕ್ಕು ನೀಡುವವರನ್ನು ಪತ್ತೆ ಮಾಡುವುದು ಸ್ಥಳೀಯ ಪೊಲೀಸರಿಗೆ ಕಷ್ಟಸಾಧ್ಯವಾಗಿದೆ. ಹೀಗಾಗಿ ಈ ಪ್ರಕರಣವನ್ನು ಮುಂದಿನ ತನಿಖೆಗೆ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com