ಮಂಗಳೂರಿನ ಸುರತ್ಕಲ್ ಬಳಿ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ: ಪರಿಸ್ಥಿತಿ ಉದ್ವಿಗ್ನ

ನಿನ್ನೆ ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಮಸೀದಿ ಬಳಿ ಮಧ್ಯರಾತ್ರಿ ದೃಶ್ಯ
ಮಸೀದಿ ಬಳಿ ಮಧ್ಯರಾತ್ರಿ ದೃಶ್ಯ
Updated on

ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ನಿನ್ನೆ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಳ 3ನೇ ಬ್ಲಾಕ್ ನ ಬದ್ರಿಯಾ ಪುರಸಭೆ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ನಡೆದಿದ್ದು, ಪರಿಸ್ಥಿತಿ ಸ್ಥಳದಲ್ಲಿ ಉದ್ವಿಗ್ನವಾಗಿದೆ.

ನಿನ್ನೆ ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಮುಸ್ಲಿಂ ಯುವಕರು ಮತ್ತು ಕೋಮುಗಲಭೆ

ಹಿಂದೂ ಮುಖಂಡರ ವಿರುದ್ದ ಪ್ರಕರಣ: ಮತ್ತೊಂದು ಘಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ವಿಚಾರವಾಗಿ ವಿಹೆಚ್ ಪಿ ಹಾಗೂ ಬಜರಂಗದಳ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣ ಮೂಲಕ ವಿಡಿಯೊ ಹರಿಬಿಟ್ಟಿದ್ದ ಪುನೀತ್ ಅತ್ತಾವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.

ಬಿಸಿ ರೋಡ್ ಚಲೋಗೆ ಕರೆ: ದಕ್ಷಿಣ ಕನ್ನಡ ಜಿಲ್ಲೆಯ ಬಿಸಿ ರೋಡ್ ಚಲೋಗೆ ವಿಹೆಚ್ ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಕರೆ ಕೊಟ್ಟಿದ್ದಾರೆ. ಶರಣ್ ಪಂಪ್‌ವೆಲ್‌ಗೆ ಮುಸಲ್ಮಾನರು ಸವಾಲು ಹಾಕಿದ್ದ ಕಾರಣ ಈ ಜಾಥಾಕ್ಕೆ ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com