

ರಾಮನಗರ/ಚಾಮರಾಜನಗರ: ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.
ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ದುರಂತ ಸಂಭವಿಸಿದೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂದು ತಿಳಿದುಬಂದಿದೆ. ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕುಣಿಗಲ್ನಿಂದ ಬೆಂಗಳೂರು ಕಡೆಗೆ ಮಾರುತಿ ಸುಜುಕಿ ಎರ್ಟಿಗಾ ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಏರ್ಬ್ಯಾಗ್ ಓಪನ್ ಆದರೂ ಐವರು ಸಾವನ್ನಪ್ಪಿದ್ದಾರೆ.
ಮತ್ತೊಂದೆಡೆ, ಟಿಪ್ಪರ್ ಹರಿದು ಕೇರಳ ಮೂಲದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ಅಪಘಾ ನಡೆದಿದೆ. ಮೃತರನ್ನು ಕೇರಳದ ದಿನೇಶ್, ಅವರ ಪತ್ನಿ ಅಂಜು ಹಾಗೂ ಮಗ ಇಶಾನ್ ಕೃಷ್ಣ ಎಂದು ಗುರುತಿಸಲಾಗಿದೆ. ಬೈಕ್ನಲ್ಲಿ ಮೂವರು ಹೋಗುತ್ತಿದ್ದಾಗ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದ ಮೂವರ ಮೇಲೆ ಲಾರಿ ಹರಿದು ಮೃತಪಟ್ಟಿದ್ದಾರೆ.