ಮುನಿರತ್ನ ಪ್ರಕರಣದಿಂದ ಕಾಂಗ್ರೆಸ್ ವಿರುದ್ಧ ಬಿಜೆಪಿ ಹೋರಾಟಕ್ಕೆ ಹಿನ್ನಡೆ: ಇನ್ನೆರಡು ಆಡಿಯೋ ಬಿಡುಗಡೆ ಮಾಡುವೆ- ಚಲುವರಾಜ್

ಮುನಿರತ್ನ ವಿಷಯವನ್ನು ನಾವು ಬಿಜೆಪಿ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ, ಆರೋಪ ಸಾಬೀತಾದರೆ ಮುಂದಿನ ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಗೆ ಬಿಡುತ್ತೇವೆ ಎಂದು ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿದ್ದಾರೆ.
ಮುನಿರತ್ನ
ಮುನಿರತ್ನ
Updated on

ಬೆಂಗಳೂರು: ವಾಲ್ಮೀಕಿ ಹಗರಣ ಮತ್ತು ಮುಡಾ ಹಗರಣ ಮುಂದಿಟ್ಟು ಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿದ್ದ ಕೇಸರಿ ನಾಯಕರುಗಳಿಗೆ ಬಿಜೆಪಿ ಶಾಸಕ ಮುನಿರತ್ನ ಬಂಧನದಿಂದ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.ಮುನಿರತ್ನ ವಿರುದ್ಧ 2 ಎಫ್ ಐ ಆರ್ ದಾಖಲಾದ ನಂತರ ಡ್ಯಾಮೇಜ್ ಕಂಟ್ರೋಲ್ ಮಾಡುವ ಪ್ರಯತ್ನದಲ್ಲಿ ಬಿಜೆಪಿ ಮುನಿರತ್ನಗೆ ನೋಟೀಸ್ ನೀಡಿದೆ.

ಮುನಿರತ್ನ ವಿಷಯವನ್ನು ನಾವು ಬಿಜೆಪಿ ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ, ಆರೋಪ ಸಾಬೀತಾದರೆ ಮುಂದಿನ ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಗೆ ಬಿಡುತ್ತೇವೆ ಎಂದು ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಹೇಳಿದ್ದಾರೆ. ಕಾಂಗ್ರೆಸ್ ಈ ವಿಷಯವನ್ನು ಜೀವಂತವಾಗಿರಿಸಲು ಪ್ರಯತ್ನಿಸುತ್ತಿದೆ. ಬಿಜೆಪಿ ದಲಿತ ವಿರೋಧಿ ಮತ್ತು ಅದರ ನಾಯಕರು, ವಿಶೇಷವಾಗಿ ಮುನಿರತ್ನ, ಮಹಿಳೆಯರು ಮತ್ತು ಒಕ್ಕಲಿಗರಿಗೆ ಅಗೌರವ ತೋರಿಸಿದ್ದಾರೆ ಎಂಬುದಾಗಿ ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಮುನಿರತ್ನ ಪ್ರಕರಣ ರಾಜಕೀಯ ಷಡ್ಯಂತ್ರ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸೇರಿದಂತೆ ಬಿಜೆಪಿ ಒಕ್ಕಲಿಗ ಮುಖಂಡರು ಆರೋಪಿಸಿದ್ದಾರೆ, ಇದಕ್ಕೆ ಕಾಂಗ್ರೆಸ್ ನಾಯಕರು ಪ್ರತಿದಾಳಿ ನಡೆಸಿದ್ದಾರೆ.

ಸಚಿವರಾದ ಎನ್.ಚಲುವರಾಯಸ್ವಾಮಿ, ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಕಾಂಗ್ರೆಸ್ ಒಕ್ಕಲಿಗ ಮುಖಂಡರ ಗುಂಪು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮುನಿರತ್ನ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚಲುವರಾಜು ಅವರನ್ನು ಭೇಟಿ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.ಬಿಜೆಪಿ ವಿರುದ್ಧ ದಲಿತ ಸಂಘಟನೆಗಳೂ ಪ್ರತಿಭಟನೆ ನಡೆಸಿದ್ದವು. ಮುನಿರತ್ನ ಪ್ರಕರಣಕ್ಕೆ ಸರ್ಕಾರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡುವಂತೆ ನಾವು ಒತ್ತಾಯಿಸಿದ್ದು, ಸಿಎಂ ಒಪ್ಪಿಗೆ ನೀಡಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ ಸಿ ಸುಧಾಮ್ ದಾಸ್ ಹೇಳಿದ್ದಾರೆ.

ಮುನಿರತ್ನ
ಶಾಸಕ ಮುನಿರತ್ನ ಬೆಂಬಲಕ್ಕೆ ನಿಂತ HDK, ಅಶೋಕ್ ವಿರುದ್ಧ ಡಿ.ಕೆ ಸುರೇಶ್ ಕಿಡಿ

ಇನ್ನು, ಭ್ರಷ್ಟಾಚಾರದ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ಅನ್ನು ಮೂಲೆಗುಂಪು ಮಾಡುವ ಸಾಧ್ಯತೆ ಇದೆ. ಎಸ್‌ಟಿ ಕಾರ್ಪೊರೇಷನ್ ಹಗರಣದ ಕುರಿತು ನ್ಯಾಯಾಲಯ ಮತ್ತು ರಾಜ್ಯಪಾಲರ ಮೊರೆ ಹೋಗುವ ಯೋಜನೆಯನ್ನು ಅದು ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ತಂದೆ ಮುನಿರತ್ನ ಹಾಗೂ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರಿಗೆ ಸಂಬಂಧಿಸಿದ ಇನ್ನೂ ಎರಡು ಆಡಿಯೋ ತುಣುಕುಗಳನ್ನು ಮಂಗಳವಾರ ಬಿಡುಗಡೆ ಮಾಡುವುದಾಗಿ ಗುತ್ತಿಗೆದಾರ ಚಲುವರಾಜು ತಿಳಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ತಮಗೆ ಪೊಲೀಸ್ ಭದ್ರತೆಯ ಭರವಸೆ ನೀಡಿದ್ದರು. ಚಲುವರಾಜು ಪೊಲೀಸರನ್ನು ಸಂಪರ್ಕಿಸದಂತೆ ಹನುಮಂತರಾಯಪ್ಪ ಅವರು ಸಲಹೆ ನೀಡಿದರು ಮತ್ತು ಕಸದ ಗುತ್ತಿಗೆಯಲ್ಲಿ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ ಜತೆ ಮಾತಾಡಿದ ಆಡಿಯೋ ಹಾಗೂ 30% ಕಮಿಷನ್​ ವಿಚಾರದ ಆಡಿಯೋ ಬಿಡುಗಡೆ ಮಾಡುತ್ತೇನೆ. ನಾಳೆ 2 ಆಡಿಯೋ ರಿಲೀಸ್​ ಮಾಡುತ್ತೇನೆ ಎಂದಿದ್ದಾರೆ. ಅವರು ಗಲಾಟೆ ಸೃಷ್ಟಿಸಿ ವೇಲು ನಾಯಕ್ ಮೇಲೆ ಆರೋಪ ಹೊರಿಸಲು ಹನುಮಂತನರಾಯಪ್ಪ ಮೂಲಕ ವಿಷಯಾಂತರಕ್ಕೆ ಕುತಂತ್ರ ಮಾಡಲಾಗಿದೆ ಎಂದು ಚಲುವರಾಜು ಆರೋಪಿಸಿದ್ದಾರೆ. ಬೆಳಗ್ಗೆ ನನ್ನನ್ನು ಕರೆದು ನ್ಯಾಯ ಕೊಡಿಸುತ್ತೇನೆ ಅಂದರು. ಬಳಿಕ ಹಣಕ್ಕೆ ಬೇಡಿಕೆ ಇಟ್ಟರು. ಇದಕ್ಕೆ ನಾನು ಈಗಾಗಲೇ ಉತ್ತರವನ್ನು ಕೊಟ್ಟಿದ್ದೇನೆ ಎಂದಿದ್ದಾರೆ. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಎದೆನೋವು ಎಂಬ ದೂರಿನ ಹಿನ್ನೆಲೆಯಲ್ಲಿ ಸೋಮವಾರ ಸಂಜೆ 7.30ಕ್ಕೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾಸಕರು ನಿತ್ಯ ತಪಾಸಣೆಗೆ ಒಳಗಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com