ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಜಾಮೀನು ಕೋರಿ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ.
Muniratna (file pic)
ಬಂಧನಕ್ಕೊಳಗಾಗಿರುವ ಶಾಸಕ ಮುನಿರತ್ನonline desk
Updated on

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಶಾಸಕ ಎನ್ ಮುನಿರತ್ನ ಅವರ ಜಾಮೀನು ಅರ್ಜಿಯ ಆದೇಶವನ್ನು ಶಾಸಕರು/ಸಂಸದರ ವಿಶೇಷ ನ್ಯಾಯಾಲಯ ಗುರುವಾರದವರೆಗೆ ಕಾಯ್ದಿರಿಸಿದೆ.

ಜಾಮೀನು ಕೋರಿ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆದೇಶವನ್ನು ನಾಳೆಗೆ ಕಾಯ್ದಿರಿಸಿದ್ದಾರೆ.

ದೂರುದಾರರ ಪರ ವಾದ ಮಂಡಿಸಿದ ವಕೀಲ ಸೂರ್ಯ ಮುಕುಂದರಾಜ್ ಅವರು, ಶಾಸಕರ ಕಚೇರಿ ಆವರಣದಲ್ಲಿ ಈ ಘಟನೆ ನಡೆದಿರುವುದರಿಂದ ಜಾಮೀನು ನೀಡಿದರೆ ಸಾಕ್ಷ್ಯ ನಾಶವಾಗುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನಿರಾಕರಿಸುವಂತೆ ಮನವಿ ಮಾಡಿದರು.

ಪ್ರಸ್ತುತ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಮುನಿರತ್ನ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು, 2015 ರಿಂದ 2020 ರವರೆಗೆ ದೂರುದಾರ ಪಾಲಿಕೆ ಸದಸ್ಯರಾಗಿದ್ದರು. ನಂತರ ಭಿನ್ನಾಭಿಪ್ರಾಯ ಬಂದಿತ್ತೆಂದು ದೂರಿನಲ್ಲಿ ಹೇಳಲಾಗಿದೆ. 2015 ರಿಂದ ಯಾವಾಗ ನಿಂದಿಸಿದ್ದರೆಂದು ಹೇಳಿಲ್ಲ ಸಿಆರ್‌ಪಿಸಿಯ ಸೆಕ್ಷನ್ 41ಎ (ಪೊಲೀಸ್ ಅಧಿಕಾರಿಯ ಮುಂದೆ ಹಾಜರಾಗುವ ಸೂಚನೆ) ಅಡಿಯಲ್ಲಿ ನೋಟಿಸ್ ಜಾರಿ ಮಾಡಬೇಕಿತ್ತು. ಅದು ಮಾಡಿಲ್ಲ. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು.

Muniratna (file pic)
ಬಿಜೆಪಿ ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಎರಡೂ ಕಡೆಯ ವಕೀಲರ ವಾದ - ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಆದೇಶ ಕಾಯ್ದಿರಿಸಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com